ನೈಸ್ ಸಂಸ್ಥೆ ಹೂಡಿದ್ದ ಮಾನನಷ್ಟ ಪ್ರಕರಣದಲ್ಲಿ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರು ಎರಡು ಕೋಟಿ ರೂಪಾಯಿ ನಷ್ಟ ಪರಿಹಾರ ನೀಡಲು ಸಿಟಿ ಸಿವಿಲ್ ಕೋರ್ಟ್ ಆದೇಶ ಹೊರಡಿಸಿದೆ.
ದೇವೇಗೌಡರ ವಿರುದ್ಧ 27 ಜೂನ್, 2012 ರಲ್ಲಿ ಮಾನನಷ್ಟ ಮೊಕದ್ದಮೆ ಕೇಸ್ ಹಾಕಲಾಗಿತ್ತು. 8 ವರ್ಷ, 11 ತಿಂಗಳು, 20 ದಿನಗಳ ನಂತರ ಈ ಆದೇಶ ಹೊರಬಿದ್ದಿದೆ.
ಸಂದರ್ಶನ ಒಂದರಲ್ಲಿ ದೇವೇಗೌಡರು, ನೈಸ್ ಸಂಸ್ಥೆಗೆ ಧಕ್ಕೆಯಾಗುವ ರೀತಿಯಲ್ಲಿ ಮಾತನಾಡಿದ್ದರು ಅಂತ ಆರೋಪಿಸಲಾಗಿತ್ತು. ಈ ಸಂಬಂಧ ದೇವೇಗೌಡರ ವಿರುದ್ಧ ನೈಸ್ ಸಂಸ್ಥೆ ಕೋರ್ಟ್ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿತ್ತು. ಅರ್ಜಿಯಲ್ಲಿ 10 ಕೋಟಿ ರೂಪಾಯಿ ಪರಿಹಾರವನ್ನ ಸಂಸ್ಥೆ ಕೇಳಿತ್ತು.
ಇದೀಗ ಕೋರ್ಟ್ನಲ್ಲಿ ಸಂಸ್ಥೆ ವಿರುದ್ಧ ಆರೋಪ ಸಾಬೀತುಪಡಿಸುವಲ್ಲಿ ದೇವೇಗೌಡರು ವಿಫಲರಾಗಿದ್ದಾರೆ. ಈ ಸಂಬಂಧ ನೈಸ್ ಸಂಸ್ಥೆಗೆ 2 ಕೋಟಿ ರೂಪಾಯಿ ಪರಿಹಾರ ನೀಡಬೇಕು ಮತ್ತು ಇನ್ಮುಂದೆ ಯಾವುದೇ ಮಾನಹಾನಿ ಹೇಳಿಕೆ ನೀಡಬಾರದು ಅಂತಾ ಸಿಟಿ ಸಿವಿಲ್ ಕೋರ್ಟ್ನ ನ್ಯಾ. ಮಲ್ಲನಗೌಡ ಆದೇಶ ನೀಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ