ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (KUWJ)ದ ಮನವಿ ಮೇರೆಗೆ, ಇತ್ತೀಚೆಗೆ ಕೋವಿಡ್ ಗೆ ಬಲಿಯಾಗಿದ್ದ ಚಿತ್ರದುರ್ಗ ಕ್ಯಾಮರಾಮೆನ್ ಬಸವರಾಜ ಕೋಟಿ ಮತ್ತು ಚನ್ನರಾಯಪಟ್ಟಣ ತಾಲ್ಲೂಕು ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಮತ್ತು ಹಿರಿಯ ಪತ್ರಕರ್ತ ಸ್ವಾಮಿಗೌಡ ಅವರ ಕುಟುಂಬಕ್ಕೆ ತಲಾ 5 ಲಕ್ಷ ರೂ ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಜೂರು ಮಾಡಿದ್ದಾರೆ.
ಬಸವರಾಜ ಕೋಟಿ ಅವರಿಗೆ ಪರಿಹಾರ ನೀಡುವಂತೆ ಚಿತ್ರದುರ್ಗ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ಸ್ವಾಮಿಗೌಡ ಅವರಿಗೆ ಪರಿಹಾರ ಮಂಜೂರು ಮಾಡುವಂತೆ ಚನ್ನರಾಯಪಟ್ಟಣ ತಾಲ್ಲೂಕು ಮತ್ತು ಹಾಸನ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘಗಳು, ರಾಜ್ಯ ಸಂಘಕ್ಕೆ ಮನವಿ ಮಾಡಿದ್ದವು.
ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು ಮನವಿ ಪರಿಗಣಿಸಿ ಪರಿಹಾರ ಮಂಜೂರು ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸಂಘ ಅಭಿನಂದನೆ ಸಲ್ಲಿಸಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ