ಮುಂದಿನ 10 ದಿನದೊಳಗೆ ರಾಜ್ಯದ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುವುದು ಅಲ್ಲದೆ ವಿದ್ಯಾರ್ಥಿಗಳಿಗೆ ಲಸಿಕೆ ಕೊಡಿಸುವ ಜವಾಬ್ದಾರಿಯನ್ನು ಆಯಾ ಕಾಲೇಜು ಪ್ರಾಂಶುಪಾಲರಿಗೆ ನೀಡಲಾಗಿದೆ ಎಂದು ಡಿಸಿಎಂ ಅಶ್ವಥ್ನಾರಾಯಣ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ, ಎಲ್ಲಾ ವಿದ್ಯಾರ್ಥಿಗಳಿಗೂ ಲಸಿಕೆ ಸಿಗುವಂತೆ ನೋಡಿಕೊಳ್ಳ ಲಾಗುವುದು. 18 ವರ್ಷ ಮೀರಿದ ಎಲ್ಲ ಕಾಲೇಜು ವಿದ್ಯಾರ್ಥಿಗಳು ಮತ್ತು ಕಾಲೇಜು ಸಿಬ್ಬಂದಿಗಳು ಲಸಿಕೆ ಪಡೆಯಬೇಕು, ಕಾಲೇಜಿಗೆ ಬರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಒಂದು ಡೋಸ್ ಲಸಿಕೆ ಪಡೆದಿರಬೇಕು. ಇಲ್ಲವಾದರೆ, ಪ್ರವೇಶ ನಿರಾಕರಿಸಲಾಗುವುದು ಎಂದರು.
ಕೊರೊನಾ ಸೋಂಕು ಕಡಿಮೆಯಾಗಿರುವ ಹಿನ್ನಲೆ ಕಾಲೇಜು ಪುನರ್ ಆರಂಭಕ್ಕೆ ಸರ್ಕಾರ ಚಿಂತನೆ ನಡೆಸಿದೆ. ಆದ್ದರಿಂದ ಲಸಿಕೆಯನ್ನು ಎಲ್ಲಾ ವಿದ್ಯಾರ್ಥಿಗಳಿಗೆ ಹಾಕಲು ತ್ವರಿತ ಕ್ರಮ ವಹಿಸಲಾಗುವುದು ಎಂದರು.
- ಖಾಸಗಿ ವಾಹನಗಳಿಗೆ ಮಾಸಿಕ ಮತ್ತು ವಾರ್ಷಿಕ ಟೋಲ್ ಪಾಸ್ ಪರಿಚಯಿಸಲು ಸರ್ಕಾರ ತೀರ್ಮಾನ
- ಬೆಂಗಳೂರಿನಲ್ಲಿ ಜನವರಿ 17ರಿಂದ ಯುಎಸ್ ಕಾನ್ಸುಲೇಟ್ ಕಚೇರಿ ಕಾರ್ಯಾರಂಭ
- ವಿಚಿತ್ರ ಕಾಯಿಲೆಗೆ 15 ಜನರು ಬಲಿಪಡೆದ ಅನುಮಾನಾಸ್ಪದ ಘಟನೆ
- ಆಕಸ್ಮಿಕ ಗುಂಡು ಸಿಡಿದು ವ್ಯಕ್ತಿ ಸಾವು
- ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ದಾಳಿ – ಆಸ್ಪತ್ರೆಯಲ್ಲಿ ಚಿಕಿತ್ಸೆ
More Stories
ಬೆಂಗಳೂರಿನಲ್ಲಿ ಜನವರಿ 17ರಿಂದ ಯುಎಸ್ ಕಾನ್ಸುಲೇಟ್ ಕಚೇರಿ ಕಾರ್ಯಾರಂಭ
ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ದಾಳಿ – ಆಸ್ಪತ್ರೆಯಲ್ಲಿ ಚಿಕಿತ್ಸೆ
ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಐತಿಹಾಸಿಕ ಸಾಧನೆ: ಗರಿಷ್ಠ ರನ್ ಹಾಗೂ ಭರ್ಜರಿ ಗೆಲುವು