ಬೇರೆ ಬೇರೆ ಮನೆಗೆ ಮದುವೆಯಾಗಿ ಬೇರಾಗಲು ಇಷ್ಟವಿಲ್ಲದ ಅವಳಿ ಸಹೋದರಿಯರಿಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಸಮೀಪದ ಅರಕೆರೆ ಸಮೀಪದ ಗ್ರಾಮದಲ್ಲಿ ಜರುಗಿದೆ.
ಶ್ರೀರಂಗಪಟ್ಟಣ ತಾಲೂಕಿನ ಹುಣಸನಹಳ್ಳಿ ಗ್ರಾಮದಲ್ಲಿ ನಡೆದ ಈ ಘಟನೆಯಲ್ಲಿ ಸುರೇಶ್ ಮತ್ತು ಯಶೋಧ ದಂಪತಿಯ ಅವಳಿ ಪುತ್ರಿಯರಾದ ದೀಪಿಕಾ ಮತ್ತು ದಿವ್ಯ (19) ಆತ್ಮಹತ್ಯೆ ಮಾಡಿಕೊಂಡವರು.
ಈ ಇಬ್ಬರು ಅವಳಿ ಸಹೋದರಿಯರು ಚಿಕ್ಕಂದಿನಿಂದ ಬಹಳ ಅನ್ಯೋನ್ಯತೆಯಿಂದ ಇದ್ದರು. ಇಬ್ಬರನ್ನೂ ಬೇರೆ ಬೇರೆ ಮನೆಗೆ ಮದುವೆ ಮಾಡಿಕೊಡಲು ಪೋಷಕರು ಸಿದ್ಧತೆ ಮಾಡಿಕೊಂಡಿದ್ದರು ಎನ್ನಲಾಗಿದೆ.
ಬೇರೆ ಬೇರೆ ಹುಡುಗರನ್ನು ಮದುವೆ ಯಾದರೆ ತಮ್ಮ ಬಾಂಧವ್ಯ ಕೊನೆಯಾಗುತ್ತದೆ ಎಂದು ನಿರ್ಧರಿಸಿ ನಿನ್ನೆ ಸಂಜೆ ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಸಂಬಂಧ ಅರಕೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ