February 23, 2026

Newsnap Kannada

The World at your finger tips!

prathap shima

KRS ಡ್ಯಾಂ ಬಿರುಕಿಲ್ಲ : ಸುಮಲತಾ ವಿರುದ್ಧ ಪರೋಕ್ಷವಾಗಿ ಗುಡುಗಿದ ಸಂಸದ ಪ್ರತಾಪ್ ಸಿಂಹ

Spread the love

ಕೆಆರ್‌ಎಸ್ ಜಲಾಶಯ ಬಿರುಕು ಬಿಟ್ಟಿದೆ ಎಂಬ ಚರ್ಚೆ ವಿಚಾರವಾಗಿ ಮೈಸೂರು ಸಂಸದ ಪ್ರತಾಪ್ ಸಿಂಹ ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಪರ ಬ್ಯಾಟಿಂಗ್ ಮಾಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಂಹ , ಕೆಆರ್​ಎಸ್ ಡ್ಯಾಂ ಬಿರುಕು ಬಿಟ್ಟಿಲ್ಲ ಎಂದು ಅಧಿಕಾರಿಗಳೇ ತಿಳಿಸಿದ್ದಾರೆ. ಅಂಥದ್ರಲ್ಲಿ ಡ್ಯಾಂ ಬಿರುಕು ಬಿಟ್ಟಿದೆ ಅನ್ನೋದು ಸರಿಯಲ್ಲ ಎಂದರು.

ಕೆಆರ್​ಎಸ್ ನಲ್ಲಿನ ನೀರಾವರಿ ಅಧಿಕಾರಿಗಳ ಜೊತೆ ನಾನು ಮಾತನಾಡಿದ್ದೇನೆ. ಅಲ್ಲಿ ಯಾವುದು ಸಮಸ್ಯೆ ಇಲ್ಲ. ಈ ಹಿಂದೆಯೂ ಕೂಡ ಮೈಸೂರು-ಬೆಂಗಳೂರು ದಶಪಥ ರಸ್ತೆ ಮಾಡುವುದಕ್ಕೂ ಬಿಡಲಿಲ್ಲ. ಸುಳ್ಳು ನೆಪಗಳನ್ನು ಹೇಳಿ ಕೆಲಸ ಮಾಡಲು ಅಡ್ಡಿಪಡಿಸಿದರು. ಅಂತ ಪರೋಕ್ಷವಾಗಿ ಸಂಸದೆ ಸುಮಲತಾಗೆ ಪ್ರತಾಪ್ ಸಿಂಹ ಟಾಂಗ್ ಕೊಟ್ಟರು.

ಗಣಿಗಾರಿಕೆ ಬಗ್ಗೆ ಸುಮಲತಾ ಹೇಳಿಕೆಯನ್ನೇ ಮಾಧ್ಯಮದವರು ಸತ್ಯ ಎಂದು ಭಾವಿಸಬೇಡಿ. ಸತ್ಯದ ಆಳಕ್ಕೆ ಹೋಗಿ ತಿಳಿದುಕೊಳ್ಳುವ ಮನಸ್ಥಿತಿ ಇರಬೇಕಾಗುತ್ತದೆ. ರಾಜಕೀಯವಾಗಿ ಯಾರು ಏನ್ ಬೇಕಾದರೂ ಹೇಳಿಕೆ ಕೊಡಬಹುದು. ಯಾರು ಕೂಡ ಎಲ್ಲಿಯೂ ಅಡ್ಡಿಪಡಿಸಿಲ್ಲ. ಇದೊಂದು ರಾಜಕೀಯ ಅಷ್ಟೇ ಎಂದು ಹೇಳಿದರು.

error: Content is protected !!