ತೆಂಗು ರಫ್ತಿಗೆ ಅವಕಾಶ, ಮೋದಿ ಸರ್ಕಾರದ ಐತಿಹಾಸಿಕ ನಿರ್ಧಾರ: ಶೋಭಾ ಕರಂದ್ಲಾಜೆ

Team Newsnap
1 Min Read
No sunflower, no peanut in sunflower and peanut oil: Shobha Karandlaje

ದೇಶದಲ್ಲಿ ಮೊದಲ ಬಾರಿ ತೆಂಗು ರಫ್ತಿಗೆ ಅವಕಾಶ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿ ದ್ದಾರೆ ಎಂದು ಕೇಂದ್ರ ಕೃಷಿ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ದೆಹಲಿಯಲ್ಲಿ ಕೇಂದ್ರ ಸಚಿವ ಸಂಪುಟ ನಿರ್ಧಾರಗಳ ಬಗ್ಗೆ ಮಾತನಾಡಿದ ಸಚಿವೆ, ತೆಂಗು ಬೆಳೆಗಾರರಿಗೆ ಉತ್ತಮ ಬೆಲೆ ಕೊಡಿಸುವ ದೃಷ್ಟಿಯಿಂದ ರಫ್ತಿಗೆ ಅವಕಾಶ ನೀಡಲಾಗಿದೆ. ಹೀಗಾಗಿ ತೆಂಗಿಗೆ ಮುಂದಿನ ದಿನಗಳಲ್ಲಿ ಉತ್ತಮ ಬೆಲೆ ಬರಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ತೆಂಗು ಅಭಿವೃದ್ಧಿ ಮಂಡಳಿಗೆ ಈ ಮುಂಚೆ ಐಎಎಸ್ ಅಧಿಕಾರಿಗಳನ್ನು ನಿರ್ದೇಶಕರಾಗಿ ನೇಮಿಸಲಾಗುತ್ತಿತ್ತು. ಈಗ ತೆಂಗು ಬೆಳೆಯುವ ರೈತನನ್ನೆ ನಿರ್ದೇಶಕರನ್ನಾಗಿ ಮಾಡಲು ನಿರ್ಧರಿಸಿದೆ.

ಆರು ಸದಸ್ಯರ ಬದಲು ಎಂಟು ಸದಸ್ಯರಿಗೆ ಅವಕಾಶ ನೀಡಿದ್ದು ತೆಂಗು ಬೆಳೆಗೆ ಉತ್ತೇಜನ ನೀಡಲಾಗುತ್ತಿದೆ. ಈ ನಿರ್ಧಾರದಿಂದ ಕರ್ನಾಟಕವೂ ಸೇರಿ ವಿಶೇಷವಾಗಿ ದಕ್ಷಿಣ ಭಾರತಕ್ಕೆ ಹೆಚ್ಚು ಲಾಭವಾಗಲಿದೆ ಎಂದು ಹೇಳಿದರು.

Share This Article
Leave a comment