ಕೆಆರ್ಎಸ್ ಬಿರುಕಿನ ಕದನಕ್ಕೆ ಬ್ರೇಕ್ ಬೀಳುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ.
ಇಂದು ಕೂಡ ಟ್ವೀಟ್ ಮಾಡಿರುವ ಸಂಸದೆ ಸುಮಲತಾ ತಮ್ಮ ವಿರೋಧಿಗಳ ಹೆಸರು ಪ್ರಸ್ತಾಪ ಮಾಡದೇ ಪರೋಕ್ಷವಾಗಿ ಗುದ್ದು ನೀಡಿದ್ದಾರೆ.
ಟ್ವೀಟ್ ಮಾಡಿರುವ ಸುಮಲತಾ ಅವರು, ಸತ್ಯದ ಪರವಾಗಿ ನಿಂತಾಗ, ಬಹಳಷ್ಟು ಶತ್ರುಗಳು ಹುಟ್ಟಿಕೊಳ್ಳು ತ್ತಾರೆ. ಕೆಲವರು ಮಹಿಳೆಯರು ಅಧಿಕಾರದಲ್ಲಿರುವುದನ್ನು ಸಹಿಸಿಕೊಳ್ಳಲಾರರು. ಭ್ರಷ್ಟರು, ನಿಷ್ಠಾವಂತ ಅಧಿಕಾರಿಗಳಿಗೆ ವರ್ಗಾವಣೆ, ಒತ್ತಡ, ಕಿರುಕುಳ ಕೊಡಬಲ್ಲರು. ಪಾಪ ಸಂಸದರನ್ನು ವರ್ಗಾವಣೆ ಮಾಡಲು ಬರುವುದಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.