ಹಾಸನದ ಬಿಜೆಪಿ ನಾಯಕ ಎ. ಮಂಜು ಮತ್ತೆ ಕಾಂಗ್ರೆಸ್ಗೆ ವಾಪಸ್ಸು ಬರುತ್ತಾರೆ ಎಂಬ ಪರೋಕ್ಷ ಸಂದೇಶ ಬೆಂಬಲಿಗರ ಮೂಲಕ ಡಿಕೆಶಿಗೆ ರವಾನೆ ಮಾಡಿ, ತೆರೆ ಮರೆಯಲ್ಲಿ ಕಾಂಗ್ರೆಸ್ ಸೇರುವ ಕಸರತ್ತು ಆರಂಭಿಸಿದ್ದಾರೆಂದು ಗೊತ್ತಾಗಿದೆ.
ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದವರು ಅರಕಲಗೂಡು ಮಾಜಿ ಶಾಸಕ ಎ ಮಂಜು. 2019ರಲ್ಲಿ ಹಾಸನ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಸ್ಪರ್ಧಿಸಿ ಪರಾಜಿತಗೊಂಡರು.
ಈಗ ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಕದ ತಟ್ಟಲು ಸಜ್ಜಾಗಿದ್ದಾರೆ ಎಂದು ಗೊತ್ತಾಗಿದೆ.
ಬೆಂಗಳೂರಿನಲ್ಲಿ ಶನಿವಾರ ಸದಾಶಿವನಗರದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಿವಾಸಕ್ಕೆ ಎ. ಮಂಜು ಬೆಂಬಲಿಗರು ಭೇಟಿ ನೀಡಿದ್ದರು.
ಈ ವೇಳೆ ಹೇಗಾದರೂ ಸರಿ ಮತ್ತೆ ಎ. ಮಂಜುರನ್ನು ಕಾಂಗ್ರೆಸ್ಗೆ ಸೇರಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಇತ್ತೀಚೆಗೆ ಬಿಜೆಪಿ ತೊರೆದಿರುವ ಎ. ಮಂಜು ತನ್ನ ಬೆಂಬಲಿಗರ ಮೂಲಕ ಕಾಂಗ್ರೆಸ್ ಸೇರಲು ಡಿ.ಕೆ ಶಿವಕುಮಾರ್ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂದು ಹೇಳಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ