ಲೋನ್ ಕೊಡಿಸುವ ನೆಪದಲ್ಲಿ ನಟ ದರ್ಶನ್ ಗೆ 25 ಕೋಟಿ ರು ವಂಚನೆಗೆ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಹೆಬ್ಬಾಳ ಠಾಣೆಯಲ್ಲಿ ಮೂವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಬ್ಯಾಂಕ್ ಮ್ಯಾನೇಜರ್ ಎಂದು ಹೇಳಿಕೊಂಡು ನಟ ದರ್ಶನ್ ಭೇಟಿಯಾಗಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.
ಈ ಮಹಿಳೆ ದರ್ಶನ್ ಭೇಟಿಯಾಗಿ ನಿಮ್ಮ ಹೆಸರಿನಲ್ಲಿ 25 ಕೋಟಿ ರು. ಲೋನ್ ಗಾಗಿ ಸ್ನೇಹಿತರೊಬ್ಬರು ಅರ್ಜಿ ಸಲ್ಲಿಸಿದ್ದಾರೆ. ಆ ಕುರಿತು ವಿಚಾರಿಸೋದಕ್ಕೆ ಬಂದಿರೋದಾಗಿ ತಿಳಿಸಿದ್ದರು.
ಆದರೆ ಆ ರೀತಿಯಲ್ಲಿ ಯಾರೂ ಲೋನ್ ಗಾಗಿ ಅರ್ಜಿ ಸಲ್ಲಿಸಿದ ಬಗ್ಗೆ ನಟ ದರ್ಶನ್ ಗೆ ಮಾಹಿತಿ ಇರಲಿಲ್ಲ.
ಬಳಿಕ, ನಟ ದರ್ಶನ್ ಸ್ನೇಹಿತ ಹರ್ಷ ಎಂಬುವರು ಮೈಸೂರಿನಲ್ಲಿ ನಟ ದರ್ಶನ್ ಗೆ ಕೋಟಿ ಕೋಟಿ ವಂಚಿಸಲು ಯತ್ನಿಸಿದಂತಹ ಮೂವರ ವಿರುದ್ಧ ದೂರು ನೀಡಿದ್ದರು.
ಈ ದೂರನ್ನು ಆಧರಿಸಿ, ಮೈಸೂರಿನ ಹೆಬ್ಬಾಳ ಠಾಣೆಯ ಪೊಲೀಸರು ಜುಲೈ.3ರಂದು ಅರುಣ್ ಕುಮಾರಿ, ಮಧುಕೇಶ, ನಂದೀಶ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು.
ಈ ಪ್ರಕರಣಲ್ಲಿ ತನಿಖೆ ಕೈಗೊಂಡ ಪೊಲೀಸರು, ಅರುಣ್ ಕುಮಾರಿ ಎಂಬುವರನ್ನು ಬಂಧಿಸಿದ್ದಾರೆ. ತನಿಖೆ ಮುಂದುವರೆದಿದೆ.
- ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಉದ್ಯೋಗಕ್ಕೆ ಅರ್ಹತೆ ಇಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ವಾರ ಭಾರೀ ಮಳೆಯ ಮುನ್ಸೂಚನೆ
- ಡಿ.9 ರಿಂದ ಬೆಳಗಾವಿಯಲ್ಲಿ ಅಧಿವೇಶನ : ಯು ಟಿ ಖಾದರ್
- ವಯನಾಡಿನ ನೂತನ ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ
- ನಟ ಧನುಷ್ ಮತ್ತು ಐಶ್ವರ್ಯಾ ರಜನಿಕಾಂತ್ ವಿಚ್ಛೇದನಕ್ಕೆ ಕೋರ್ಟ್ ಅನುಮೋದನೆ
More Stories
ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಉದ್ಯೋಗಕ್ಕೆ ಅರ್ಹತೆ ಇಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ನವೆಂಬರ್ 28: ರಾಜ್ಯದ ಅಭಿವೃದ್ಧಿಗೆ ಮಹತ್ವದ ಸಚಿವ ಸಂಪುಟ ಸಭೆ
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!