ಜನ ಸಂಖ್ಯಾ ನಿಯಂತ್ರಣ ಮಸೂದೆ ಕರ್ನಾಟಕದಲ್ಲೂ ಜಾರಿ ಆಗಲಿ – ಸಚಿವ ಬೈರತಿ ಬಸವರಾಜ್

Team Newsnap
1 Min Read

ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ಜನಸಂಖ್ಯಾ ನಿಯಂತ್ರಣ ಮಸೂದೆ ಕರಡು ಸಿದ್ದಪಡಿಸಿರುವ ಬೆನ್ನಲ್ಲೇ ಪರ-ವಿರೋಧ ಚರ್ಚೆಗಳು ಆರಂಭವಾಗಿವೆ.

ಇತ್ತೀಚೆಗೆ ಸಚಿವ ಸಿಟಿ ರವಿ ಜನಸಂಖ್ಯಾ ನಿಯಂತ್ರಣ ಮಸೂದೆ ರಾಜ್ಯದಲ್ಲೂ ಜಾರಿಯಾಗಬೇಕು ಎಂದಿದ್ದರು. ಇದರ ಬೆನ್ನಲ್ಲೀಗ ದಾವಣಗೆರೆಯಲ್ಲಿ ಬುಧವಾರ ಸಚಿವ ಭೈರತಿ ಬಸವರಾಜ್ ಕೂಡ ಕರ್ನಾಟಕದಲ್ಲಿ ಜನಸಂಖ್ಯಾ ನಿಯಂತ್ರಣ ಮದೂದೆ ಜಾರಿಗೆ ಆಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತಾಡಿದ ಸಚಿವ ಭೈರತಿ ಸುರೇಶ್​​ , ದೇಶದಲ್ಲಿ ಜನಸಂಖ್ಯೆ ನಿಯಂತ್ರಣ ನೀತಿ ಜಾರಿ ಅತ್ಯಗತ್ಯ. ಭಾರತದಲ್ಲಿ ಈಗ ಜನಸಂಖ್ಯೆ 150 ಕೋಟಿ ದಾಟುತ್ತಿದೆ. ಹೀಗಾದರೆ ಎಲ್ಲರಿಗೂ ಮೂಲಭೂತ ಸೌಲಭ್ಯ ಸಿಗೋದು ಅನುಮಾನ. ಅಮೆರಿಕಾ ಜನಸಂಖ್ಯೆ ಭಾರತಕ್ಕಿಂತ ಕಡಿಮೆ ಇದೆ. ಆದ್ದರಿಂದ ಅಮೆರಿಕಾದಲ್ಲಿ ಎಲ್ಲರಿಗೂ ಸೌಲಭ್ಯಗಳು ಸಿಗುತ್ತವೆ ಎಂದಿದ್ದಾರೆ.

ಕರ್ನಾಟಕದಲ್ಲೂ ಜನಸಂಖ್ಯಾ ನಿಯಂತ್ರಣ ಮಸೂದೆ ಜಾರಿಯಾಗಲಿ. ಇದರ ಸಾಧಕಬಾಧಕ ಚರ್ಚಿಸಿ ಸರ್ಕಾರ ಮುಂದಿನ ದಿನಗಳಲ್ಲಿ ಒಂದು ಸೂಕ್ತ ತೀರ್ಮಾನಕ್ಕೆ ಬರಲಿದೆ. ಜನಸಂಖ್ಯಾ ನಿಯಂತ್ರಣ ಮಸೂದೆ ಕರಡು ಬಿಡುಗಡೆ ಮಾಡಿರುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ ಎಂದು ಹೇಳಿದರು.

Share This Article
Leave a comment