February 25, 2026

Newsnap Kannada

The World at your finger tips!

indrajith

ಮೈಸೂರಿನ ಸಂದೇಶ್ ಪ್ರಿನ್ಸ್‌ ನಲ್ಲಿ ಸ್ಟಾರ್ ನಟನಿಂದ ವೇಟರ್ ಮೇಲೆ ಹಲ್ಲೆ: ಇಂದ್ರಜಿತ್ ದೂರು

Spread the love

ಸ್ಟಾರ್ ನಟರೊಬ್ಬರು ಹೋಟೆಲ್‌ನ ದಲಿತ ವೇಟರ್ ಒಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ನಿರ್ಮಾಪಕ ಇಂದ್ರಜಿತ್ ಲಂಕೇಶ್ ಗುರುವಾರ ಗೃಹ ಸಚಿವ ಬಸವರಾಜ್ ಬೊಮ್ಮಾಯಿಗೆ ದೂರು ನೀಡಿದರು.

ಮೈಸೂರಿನ ಸಂದೇಶ್ ಪ್ರಿನ್ಸ್ ಹೋಟೇಲಿನಲ್ಲಿ ನಡೆದ ಘಟನೆಯಲ್ಲಿ ಸಂಪೂರ್ಣ ದೃಶ್ಯ ಸಿಸಿಟಿವಿ ಯಲ್ಲಿ ಸೆರೆಯಾಗಿದೆ.

ಸುದ್ದಿಗಾರರ ಜೊತೆ ಮಾತನಾಡಿದ ಇಂದ್ರಜಿತ್, ವೇಟರ್ ಮೇಲೆ ನಡೆದ ಹಲ್ಲೆಯಿಂದ ಕಣ್ಣುಗಳಿಗೆ ಹಾನಿಯಾಗಿದೆ. ಸಿಸಿ ಟಿವಿ ದೃಶ್ಯ ಇದೆ. ಕೂಡಲೇ ಈ ಬಗ್ಗೆ ತನಿಖೆ ನಡೆಸಿ ಎಂದು ಇಂದ್ರಜಿತ್ ಆಗ್ರಹಿಸಿದ್ದಾರೆ. ಆದರೆ ನಟನ ಹೆಸರನ್ನು ಮಾತ್ರ ಇಂದ್ರಜಿತ್ ಮನವಿಯಲ್ಲಿ ಉಲ್ಲೇಖ ಮಾಡಿಲ್ಲ.

ನಾನು ಸಾಮಾನ್ಯರ ಪರ. ಪ್ರತಿಯೊಂದು ಕೇಸ್ ನಲ್ಲಿ ಸಾಮಾನ್ಯರಿಗೆ ನ್ಯಾಯ ಸಿಗ್ತಿಲ್ಲ. ಹೀಗಾಗಿ ಈ ಪ್ರಕರಣದಲ್ಲಾದರೂ ನ್ಯಾಯ ಸಿಗಲಿ ಎಂದು ಇಂದ್ರಜಿತ್ ಒತ್ತಾಯಿಸಿದ್ದಾರೆ.

error: Content is protected !!