February 25, 2026

Newsnap Kannada

The World at your finger tips!

election , politics , JDS

2022 ರ ಜ. 15ರ ಮೊದಲೇ ಜೆಡಿಎಸ್ 150 ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕುಮಾರಸ್ವಾಮಿ

Spread the love

ಮುಂದಿನ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪಕ್ಷ ತಯಾರಾಗುತ್ತಿದೆ. ಜನವರಿ 15ರ ಒಳಗೆ ಜೆಡಿಎಸ್ ನ 150 ಜನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ, ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದರು.

ಜೆಪಿ ಭವನದಲ್ಲಿ ಪಕ್ಷ ಸಂಘಟನೆ ಕುರಿತು ಜೆಪಿ ಭವನದಲ್ಲಿ ಸಭೆ ನಡೆಸಿದ ಬಳಿಕ ಮಾತನಾಡಿದ ಕುಮಾರಸ್ವಾಮಿ, ಒಂದು ವಾರಗಳ ಕಾಲ ಪಕ್ಷದ ಜಿಲ್ಲಾವಾರು ಸಂಘಟನೆ ಸಭೆ ಕರೆದಿದ್ದೇನೆ. ಕೋವಿಡ್ ಇನ್ನೂ ಇದೆ. ಹೀಗಾಗಿ ನಾನು ಜಿಲ್ಲೆಗಳಿಗೆ ಹೋಗಲಾಗುತ್ತಿಲ್ಲ ಎಂದರು.‌

ಮುಂದಿನ ಐದು ದಿನಗಳ ಕಾಲ ಸಂಘಟನೆ ಬಗ್ಗೆ ಚರ್ಚೆ ಮಾಡ್ತೀವಿ. ಆಷಾಡ ಮಾಸದ ನಂತರ ಜಿಲ್ಲಾವಾರು ಪ್ರವಾಸ ಮಾಡಲಿದ್ದೇನೆ. ಮುಂದಿನ ವಿಧಾನ ಸಭೆ ಚುನಾವಣೆಗೆ ಪಕ್ಷ ಸಂಘಟನೆ ಮಾಡುವುದು ನಮ್ಮ ಗುರಿ. ಮುಂದಿನ ದಿನಗಳಲ್ಲಿ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಪ್ರಾದೇಶಿಕ ಪಕ್ಷದ ಅನಿವಾರ್ಯತೆ ತಿಳಿಸಲಿದ್ದೇವೆ ಅಂತ ತಿಳಿಸಿದರು.

error: Content is protected !!