ಯಶಿಕಾ ಆನಂದ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ ಆಕೆಯ ಸ್ನೇಹಿತೆ ದಾರುಣವಾಗಿ ಸಾವನ್ನಪ್ಪಿದ ಘಟನೆ ಚೆನ್ನೈನ ಮಹಬಲಿಪುರಂನಲ್ಲಿ ಜರುಗಿದೆ.
ತಮಿಳು, ತೆಲುಗು ಸಿನಿಮಾದಲ್ಲಿ ನಟಿಸಿದ ನಟಿ ಯಶಿಕಾ ಆನಂದ್ ತಮ್ಮ ಸ್ನೇಹಿತರ ಜೊತೆ ಮಹಾಬಲಿಪುರಂನಿಂದ ಚೆನ್ನೈಗೆ ಪ್ರಯಾಣ ಮಾಡುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಯಶಿಕಾ ಅವರಿಗೆ ಗಂಭೀರ ಗಾಯಗಳಾಗಿವೆ. ಅವರ ಜೊತೆ ಪ್ರಯಾಣ ಮಾಡುತ್ತಿದ್ದ ಸ್ನೇಹಿತೆ ವಲ್ಲಿಚೆಟ್ಟಿ ಭವಾನಿ (28) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ತೀವ್ರವಾಗಿ ಗಾಯಗೊಂಡಿದ್ದ ಯಶಿಕಾಳನ್ನು ಪ್ರಥಮ ಚಿಕಿತ್ಸೆ ನೀಡಿ, ಕಾರಿನಲ್ಲಿದ್ದ ಇತರ ಸ್ನೇಹಿತರನ್ನು ಚೆನ್ನೈನ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.
ಅಪಘಾತ ಸಂಬಂಧ ಮಹಾಬಲಿಪುರಂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಅತಿ ವೇಗವಾಗಿ ಕಾರು ಚಾಲನೆ ಮಾಡಿದ್ದೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಡ್ರಂಕ್ ಆ್ಯಂಡ್ ಡ್ರೈವ್ ಅನುಮಾನ ಕೂಡ ಮೂಡಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ