ರೈತರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲು 1 ಸಾವಿರ ಕೋಟಿ ರು ವೆಚ್ಚದಲ್ಲಿ ಹೊಸ ಶಿಷ್ಯ ವೇತನ ಯೋಜನೆಯನ್ನು ಜಾರಿಗೆ ತರುವುದಾಗಿ ನೂತನ ಸಿಎಂ ಬಸವರಾಜ ಬೊಮ್ಮಾಯಿ ಬುಧವಾರ ಘೋಷಣೆ ಮಾಡಿದರು.
ಮುಖ್ಯಮಂತ್ರಿಯಾದ ನಂತರ ಮೊದಲ ಸುದ್ದಿಗೋಷ್ಠಿ ನಡೆಸಿದ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯದ ರೈತರಿಗೆ ಸಿಹಿ ಸುದ್ದಿ ನೀಡಿದ್ದಾರೆ.
ಸಿಎಂ ಬೊಮ್ಮಾಯಿ ಘೋಷಣೆಗಳು:
- ರೈತರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲು ಒಂದು ಸಾವಿರ ಕೋಟಿ ವೆಚ್ಚದಲ್ಲಿ ಹೊಸ ಶಿಷ್ಯ ವೇತನ ಯೋಜನೆ.
- ಸಂಧ್ಯಾ ಸುರಕ್ಷಾ ಯೋಜನೆಯಲ್ಲಿ ಮಾಸಾಶನ 1,000 ದಿಂದ 1,200 ರೂ.ಗೆ ಹೆಚ್ಚಳ. ಈ ಯೋಜನೆಗೆ 863 ಕೋಟಿ ಹೆಚ್ಚುವರಿ ವೆಚ್ಚ ಆಗಲಿದೆ.
- ಅಂಗವಿಕಲರ ವೇತನ 600 ರೂ. ಯಿಂದ 800 ರೂ.ಗೆ ಹೆಚ್ಚಳ
- ವಿಧವಾ ವೇತನ 800 ರೂ.ಗೆ ಹೆಚ್ಚಳ. 17.25 ಲಕ್ಷ ಫಲಾನುಭವಿಗಳಿಗೆ ಲಾಭ ಸಿಗಲಿದೆ.
ಸಿಎಂ ಪ್ರಮುಖ ನಿರ್ಧಾರಗಳು:
- ರಾಜ್ಯದ ಎಲ್ಲಾ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚೆ ನಡೆಸಿದ್ದೇನೆ. ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.
- ಮ್ಯಾಕ್ರೋ ಮ್ಯಾನೇಜ್ಮೆಂಟ್ ಅಲ್ಲ, ಮೈಕ್ರೋ ಮ್ಯಾನೇಜ್ಮೆಂಟ್ ಮಾಡಬೇಕು.
- ಇಲಾಖೆ ನಡುವೆಯೇ ಯಾವುದೇ ತಡವಿಲ್ಲದೇ ಕೆಲಸ ಆಗಬೇಕು.
- ಎಲ್ಲರೂ ಒಂದು ತಂಡವಾಗಿ ಕಾರ್ಯನಿರ್ವಹಿಸಬೇಕು. ಏನು ಮಾಡಿದರೂ ನಡೆಯುತ್ತೆ ಎಂಬ ಮನೋಭಾವ ಇನ್ನೂ ನಡೆಯೋದಿಲ್ಲ ಎಂಬ ಸ್ಪಷ್ಟ ಸೂಚನೆ ನೀಡಿದ್ದೇನೆ,
- ಆರ್ಥಿಕ ವೆಚ್ಚ ಕಡಿಮೆ ಮಾಡಲು ಎಲ್ಲಾ ಇಲಾಖೆಗಳ ವೆಚ್ಚವನ್ನು ಕನಿಷ್ಠ 5 ರಷ್ಟಾದರೂ ಕಡಿಮೆ ಮಾಡಬೇಕು.
- ಫೈಲ್ ಕ್ಲಿಯರೆನ್ಸ್ ತಡವಾಗುವು ದನ್ನು ತಡೆಯಲು ವಿಶೇಷ ಯೋಜನೆ ಜಾರಿ ಮಾಡುತ್ತೇವೆ. 15 ದಿನಗಳಲ್ಲಿ ಹೊಸ ಯೋಜನೆ ಆರಂಭವಾಗಲಿದೆ.
- ಹೊಸ ದಿಸ್ಸೂಚಿಯಿಂದ ಆಡಳಿತದಲ್ಲಿ ದಕ್ಷತೆ ತರುವ, ಅಭಿವೃದ್ಧಿ ಕಾಮಗಾರಿಗೆ ವೇಗ ನೀಡುವ ಕಾರ್ಯ ಮಾಡುತ್ತೇವೆ.
- ಆಡಳಿತ ದೃಷ್ಠಿಯಿಂದಲೂ ಆರ್ಥಿಕ ಇಲಾಖೆಯೊಂದಿಗೆ ಮಾತುಕತೆ ನಡೆಸುತ್ತೇನೆ.
- ಕೊರೊನಾ ಮತ್ತು ನೆರೆ ಸವಾಲು ಎದುರಿದೆ. ಆರೋಗ್ಯ ಸಚಿವರೊಂದಿಗೆ ಈ ಬಗ್ಗೆ ಹೆಚ್ಚಿನ ಚರ್ಚೆ ನಡೆಸುತ್ತೇವೆ.
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
- ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
- ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
More Stories
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ