ಉತ್ತರ ಕನ್ನಡ ಜಿಲ್ಲೆಗೆ ಪ್ರವಾಹ ಪರಿಸ್ಥಿತಿ ಅವಲೋಕನ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯಿಂದ ಕಾರವಾರಕ್ಕೆ ತೆರಳುವ ಸಂದರ್ಭದಲ್ಲಿ ಸಣ್ಣ ಅಪಘಾತವಾಗಿದೆ.
ಮಾಜಿ ಸಚಿವ ಶಿವರಾಮ ಹೆಬ್ಬಾರ್ ಪ್ರಯಾಣಿಸುತ್ತಿದ್ದ ವಾಹನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಹುಬ್ಬಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.
ಸಿಎಂ ಬೆಂಗಾವಲು ವಾಹನಕ್ಕೆ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಇದ್ದ ಕಾರು ಹಿಂಬದಿಯಿಂದ ಡಿಕ್ಕಿಯಾಗಿದೆ. ಶಿವರಾಮ್ ಹೆಬ್ಬಾರ್ ಹಾಗೂ ಕಾರಿನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ದುರಂತ ಸಂಭವಿಸಿಲ್ಲ.
ಸದ್ಯದ ವರದಿಯ ಪ್ರಕಾರ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಹಾಗೂ ಅಧಿಕಾರಿಗಳು ಕಾರವಾರಕ್ಕೆ ಯಲ್ಲಾಪುರ, ಅಂಕೋಲಾ ಮೂಲಕ ತೆರಳಿದ್ದಾರೆ.
- ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
- MUDA ಹಗರಣ: ಜೆಡಿಎಸ್ ಶಾಸಕ ಜಿಟಿಡಿ ವಿರುದ್ಧ ಕಿಕ್ಬ್ಯಾಕ್ ಆರೋಪ, ಲೋಕಾಯುಕ್ತದಲ್ಲಿ ದೂರು
- ನಕಲಿ ಸಿಗರೇಟ್ ತಯಾರಿಸಿ ಮಾರಾಟ – ಕೋಟಿ ಮೌಲ್ಯದ ಸಿಗರೇಟ್ ವಶ
- ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
More Stories
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ