ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಳಿಸಿ ಬಿಜೆಪಿ ಸೇರಿದ್ದ 17 ಮಂದಿ ಬಾಂಬೆ ಸಹೋದರರು ಆರ್‌ಎಸ್‌ಎಸ್ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಮೂವರನ್ನು ಹೊರತು ಪಡಿಸಿ ಉಳಿದವರಿಗೆ ಮಂತ್ರಿ ಸ್ಥಾನದಿಂದ ಕೊಕ್ ನೀಡುವ ನಿರ್ಧಾರವನ್ನು ಆರ್‌ಎಸ್ ಎಸ್ ಬೈಠಕ್ ನಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷವನ್ನು ತೊರೆದು ಬಿಜೆಪಿ ಸೇರಿದ್ದ ಶಾಸಕರ ಕಾರ್ಯವೈಖರಿ ಆರ್‌ಎಸ್‌ಎಸ್ ನಾಯಕರಿಗೆ ಸಮಾಧಾನ ತಂದಿಲ್ಲ ಎಂಬುದು ಒಟ್ಟಾರೆ ಅಭಿಪ್ರಾಯ.
ಬಾಂಬೆ ಬ್ರದರ್ಸ್ ಪಕ್ಷ ಸೇರುವ ಮೊದಲು ಹೇಳಿದ ಮಾತನ್ನು ತಪ್ಪಿದ್ದಾರೆ. ಅಧಿಕಾರವನ್ನು ಪಡೆದು ಎರಡು ವರ್ಷಗಳೇ ಕಳೆಯುತ್ತಾ ಬಂದರೂ ಕೂಡ ಡಾ.ಸುಧಾಕರ್, ಎಸ್.ಟಿ.ಸೋಮಶೇಖರ್, ಬೈರತಿ ಬಸವರಾಜ್ ಅವರನ್ನು ಹೊರತು ಪಡಿಸಿ ಉಳಿದ ಯಾವುದೇ ವಲಸೆ ಶಾಸಕರು ಕೂಡ ಆರ್‌ಎಸ್‌ಎಸ್ ನಾಯಕರನ್ನು ಭೇಟಿಯಾಗಿಲ್ಲ. ಅಲ್ಲದೇ ಅವರ ಕಾರ್ಯವೈಖರಿಯಿಂದ ಪಕ್ಷಕ್ಕೆ ಲಾಭವಾಗಿಲ್ಲ. ಹೀಗಾಗಿ ಈ ಮೂವರನ್ನು ಹೊರತು ಪಡಿಸಿ ಉಳಿದ ಶಾಸಕರಿಗೆ ಸಚಿವ ಸಂಪುಟದಲ್ಲಿ ಸ್ಥಾನವನ್ನು ನೀಡಬೇಡಿ. ಬದಲಾಗಿ ನಿಗಮ ಮಂಡಳಿ ಸ್ಥಾನವನ್ನು ನೀಡಬೇಕು ಎಂದು ನಿರ್ಧಾರ ಕೈಗೊಳ್ಳಲಾಗಿದೆ.
ಸಚಿವ ಸಂಪುಟದಲ್ಲಿ ಬಿಜೆಪಿಯ ಹಿರಿಯ ಶಾಸಕರಾದ ಆರ್.ಅಶೋಕ್, ಕಾರಜೋಳ, ಅಶ್ವಥ್ ನಾರಾಯಣ, ಅರವಿಂದ ಬೆಲ್ಲದ್ ಅವರಿಗೆ ಸಚಿವ ಸ್ಥಾನವನ್ನು ನೀಡಬೇಕು. ಉಳಿದವರನ್ನು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವಂತೆ ಸೂಚಿಸಬೇಕೆಂಬ ನಿರ್ಧಾರ ಕೈಗೊಳ್ಳಲಾಗಿದೆ.
ಆರ್‌ಎಸ್‌ಎಸ್ ಮುನಿಸು ಹಲವು ಹಾಲಿ ಸಚಿವರಿಗೆ ಮುಂದಿನ ಸಂಪುಟದಲ್ಲಿ ಕೋಕ್ ಸಿಗೋದು ಖಚಿತ.
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
- ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
- ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
More Stories
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ