February 22, 2026

Newsnap Kannada

The World at your finger tips!

bangarappa son

ಹುಬ್ಬಳ್ಳಿ ಬಂಗಾರಪ್ಪ ಪುತ್ರ ಮಧು ಕಾಂಗ್ರೆಸ್ ಗೆ ಸೇರ್ಪಡೆ

Spread the love

ಮಾಜಿ ಸಿಎಂ ದಿ.ಎಸ್. ಬಂಗಾರಪ್ಪ ಪುತ್ರ, ಮಾಜಿ ಶಾಸಕ ಮಧು ಬಂಗಾರಪ್ಪ ಶುಕ್ರವಾರ ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾದರು.

ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪಕ್ಷದ ಧ್ವಜ ನೀಡುವ ಮೂಲಕ ಮಧು ಬಂಗಾರಪ್ಪ ಅವರನ್ನು ಪಕ್ಷಕ್ಕೆ ಬರ ಮಾಡಿಕೊಂಡರು.

ಎಐಸಿಸಿ ಕಾರ್ಯದರ್ಶಿ ಮಧು ಯಾಕ್ಷಿಗೌಡ, ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ್, ಹಿರಿಯ ನಾಯಕರಾದ ಕೆ.ಎಚ್. ಮುನಿಯಪ್ಪ, ಎಚ್.ಕೆ. ಪಾಟೀಲ್, ಅಲ್ಲಂ ವೀರಭದ್ರಪ್ಪ, ಶಾಸಕ ಪ್ರಸಾದ್ ಅಬ್ಬಯ್ಯ ಹಾಗೂ ಮಧು ಬಂಗಾರಪ್ಪ ಅವರ ಸಾವಿರಾರು ಬೆಂಬಲಿಗರು ಹಾಜರಿದ್ದರು.

error: Content is protected !!