ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ದೆಹಲಿಗೆ ನಾಗರಾಜ್ ಎಂಬ ರೈತ ಪಾದಯಾತ್ರೆಯನ್ನು ಆರಂಭಿಸಿದ್ದಾರೆ.
ಇಂದು ಧಾರವಾಡದ ಅಂಬೇಡ್ಕರ್ ವೃತ್ತಕ್ಕೆ ಭೇಟಿ ನೀಡಿದ ನಾಗರಾಜ್, ಕೇಂದ್ರ ಸರ್ಕಾರದ ಮೇಲೆ ಕಿಡಿಕಾರಿದರು.
ಉತ್ತರ ಪ್ರದೇಶದಲ್ಲಿ ರೈತರು ಪ್ರತಿಭಟನೆ ಮಾಡಿದರೆ ಚರ್ಮ ಸುಲಿಯುತ್ತೆನೆ ಎಂದು ಯುಪಿ ಸರ್ಕಾರ ಹೇಳುತ್ತಿದೆ. ಇದಕ್ಕೆ ನಾವು ಜಗ್ಗಲ್ಲ ಎಂದು ನಾಗರಾಜ್ ಹೇಳಿದರು.
ಪ್ರಧಾನಿ ಮೋದಿ ಹಾಗೂ ಅಮೀತ್ ಷಾಗೆ ಎಚ್ಚರಿಕೆ ನೀಡಿದ ಈ ರೈತ, ರೈತರ ಮೇಲೆ ಹಲ್ಲೆ ಮಾಡಿದ್ದೇ ಆದರೆ ಯುಪಿಗೆ ಇಡಿ ರೈತ ಸಮುದಾಯ ನುಗ್ಗಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.
ಚಾಮರಾಜನಗರದಿಂದ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟದ ಸ್ಥಳಕ್ಕೆ ಹೋರಟಿದ್ದೇನೆ. ಕಳೆದ ಫೆಬ್ರವರಿಯಲ್ಲೇ ತಮ್ಮ ಪಾದಯಾತ್ರೆ ಆರಂಭಿಸಿದ್ದೆ. ಆದರೆ ಕೊರೊನಾದಿಂದ ಲಾಕ್‍ಡೌನ್ ಆದ ಹಿನ್ನೆಲೆ ಪಾದಯಾತ್ರೆ ಮೊಟಕು ಗೊಳಿಸಿದ್ದೆ. ಈಗ ಜುಲೈ 2 ರಿಂದ ಪಾದಯಾತ್ರೆ ಮತ್ತೆ ಆರಂಭಿಸಿದ್ದೇನೆ. 7 ಸಾವಿರ ಕಿಲೋ ಮೀಟರ್ ವರೆಗೆ ಪಾದಯಾತ್ರೆ ಮಾಡಲಿದ್ದೇನೆ ಎಂದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ