February 21, 2026

Newsnap Kannada

The World at your finger tips!

teacher, learning, school

Just for fun, I threatened with a bomb call - statement of a minor boy ಜಸ್ಟ್ ಫಾರ್ ಫನ್‍ ಗೆ ಬಾಂಬ್ ಬೆದರಿಕೆ ಹಾಕಿದ್ದೆ – ಅಪ್ರಾಪ್ತ ಬಾಲಕ ಹೇಳಿಕೆ

ಖಾಸಗಿ ಶಾಲೆಗಳ ಆರಂಭದಿಂದ ಹಿಂದೆ ಸರಿದ ಆಡಳಿತ ಮಂಡಳಿ: ಆತುರ ನಿರ್ಧಾರವಿಲ್ಲ – ಸಿಎಂ

Spread the love

ರಾಜ್ಯದಲ್ಲಿ ಖಾಸಗಿ ಶಾಲೆಗಳನ್ನು ಆರಂಭಿಸುವ ನಿರ್ಧಾರವನ್ನು ಹಿಂದಕ್ಕೆ ಪಡೆಯಲಾಗಿದೆ.
ಅದೇ ರೀತಿಯಲ್ಲಿ ಸಿಎಂ ಬೊಮ್ಮಯಿ ಪ್ರತಿಕ್ರಿಯೆ ನೀಡಿ
ಶಾಲೆಗಳ ಆರಂಭ ಸಂಬಂಧ ಎಲ್ಲಾ ಆಯಾಮದಲ್ಲಿಯೂ ಚರ್ಚಿಸಿ ಖಾಸಗಿ ಶಾಲಾ ಸಂಘಟನೆಗಳ ಒಕ್ಕೂಟದ ಜೊತೆಯಲ್ಲಿ ಸೌಹಾರ್ದಯುತವಾಗಿ ಚರ್ಚಿಸಿ ನಂತರ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ , ಸೋಮವಾರದಿಂದ ಶಾಲೆಗಳ ಆರಂಭಕ್ಕೆ ಮುಂದಾಗಿದ್ದ ಖಾಸಗಿ ಶಾಲಾ ಸಂಘಟನೆಗಳ ಒಕ್ಕೂಟಕ್ಕೆ ಸೂಚನೆ ನೀಡಿ, ಸದ್ಯಕ್ಕೆ ಶಾಲೆ ಆರಂಭ ಬೇಡ ಎಂದು ತಿಳಿಸಲಾಗಿದೆ.

ಶಾಲೆಗಳ ಆರಂಭ ಕುರಿತು ಬೇರೆ ಬೇರೆ ರಾಜ್ಯದಲ್ಲಿರುವ ಸ್ಥಿತಿಗತಿ ಮತ್ತು ನಮ್ಮ ರಾಜ್ಯದಲ್ಲಿ ಪರಿಸ್ಥಿತಿ ಯಾವ ರೀತಿ ಇದೆ.ವ್ಯಾಕ್ಸಿನೇಷನ್ ವ್ಯವಸ್ಥೆ ಯಾವ ರೀತಿ ಆಗಿದೆ. ಎಲ್ಲವನ್ನೂ ನೋಡಿಕೊಂಡ ನಂತರವೇ ಶಾಲೆಗಳ ಆರಂಭ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ. ಇದರಲ್ಲಿ ಆತುರದ ನಿರ್ಧಾರ ಕೈಗೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.

error: Content is protected !!