ಪೋಲಿಸರ ಮೇಲೆ ಹಲ್ಲೆಗೆ ಯತ್ನ: ಬೆಂಗಳೂರಿನಲ್ಲಿ ಆಫ್ರಿಕನ್ ಪ್ರಜೆಗಳ ಮೇಲೆ ಲಾಠಿ ಪ್ರಹಾರ

Team Newsnap
1 Min Read

ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಪರಿಣಾಮ‌ ಆಫ್ರಿಕನ್ ಪ್ರಜೆಗಳ ಮೇಲೆ ಪೋಲಿಸರು ಲಾಠಿ ಪ್ರಹಾರ ಮಾಡಿದ್ದಾರೆ. ಅಲ್ಲದೇ 6 ಕ್ಕೂ ಹೆಚ್ಚು ಆಫ್ರಿಕನ್ ಪ್ರಜೆಗಳನ್ನು ‌ಬಂಧಿಸಿದ್ದಾರೆ.

ಪೊಲೀಸ್ ವಶದಲ್ಲಿದ್ದ ಆಫ್ರಿಕನ್ ಪ್ರಜೆ ಸಾವು ಪ್ರಕರಣವನ್ನ ಖಂಡಿಸಿ ಬೆಂಗಳೂರಿನ ಜೆಸಿ ನಗರ ಠಾಣೆಯಲ್ಲಿ ಆಫ್ರಿಕನ್ಸ್​ ಪ್ರತಿಭಟನೆ ನಡೆಸುತ್ತಿದ್ದರು.

ಈ ವೇಳೆ ಕೆಲವು ಉದ್ರಿಕ್ತರ ಗುಂಪು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದೆ. ಆಗ ಪೊಲೀಸರು ಆಫ್ರಿಕನ್ ಪ್ರಜೆಗಳ ಮೇಲೆ ಲಾಠಿಚಾರ್ಜ್​ ಮಾಡಿ ಲಾಠಿ ರುಚಿ ತೋರಿಸಿದ್ದಾರೆ.

ಡ್ರಗ್​​ ಕೇಸ್ ಪ್ರಕರಣ ಸಂಬಂಧ ನಿನ್ನೆ ಜೆಸಿ ನಗರ ಠಾಣೆಯ ಪೊಲೀಸರು ಆಫ್ರಿಕನ್ ಪ್ರಜೆ ಜೊಯೆಲ್ ಮಾನ್ ಎಂಬಾತನನ್ನ ಬಂಧಿಸಿದ್ದರು.

ಬಂಧಿತ ಆರೋಪಿಗೆ ನಿನ್ನೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಜೊಯೆಲ್ ಮಾನ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ ಅಂತಾ ಪೊಲೀಸರು ತಿಳಿಸಿದ್ದಾರೆ

ಈ ಘಟನೆಯನ್ನು ಆಫ್ರಿಕನ್ ಪ್ರಜೆಗಳು, ಕೊಲೆ ಎಂದು ಆರೋಪಿಸಿದ್ದಾರೆ. ಪೊಲೀಸರು ಹೊಡೆದು ಸಾಯಿಸಿದ್ದಾರೆ ಎಂದು ಆರೋಪಿಸಿರುವ ಆಫ್ರಿಕನ್ ಪ್ರಜೆಗಳು ಇಂದು ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.

ಈ ವೇಳೆ ಕೆಲವು ಆಫ್ರಿಕನ್ ಪ್ರಜೆಗಳು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋಗಿದ್ದರಿಂದ ಪೊಲೀಸರು ಲಾಠಿಚಾರ್ಜ್​ ನಡೆಸಿದ್ದಾರೆ. ಜೊತೆಗೆ ಕೆಲವು ಆಫ್ರಿಕನ್ ಪ್ರಜೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Share This Article
Leave a comment