ಟೋಕಿಯೋ ಒಲಿಂಪಿಕ್ಸ್ 2020 ರಲ್ಲಿ ಬುಧವಾರ ಬೆಳಿಗ್ಗೆ ನಡೆದ ಜಾವೆಲಿನ್ ಥ್ರೋ ಪಂದ್ಯದಲ್ಲಿ ಭಾರತದ ನೀರಜ್ ಚೋಪ್ರಾ ಅವರು ಫೈನಲ್ಗೆ ಅರ್ಹತೆ ಪಡೆದುಕೊಂಡಿದ್ದಾರೆ.
ಗ್ರೂಪ್ ಎ ಯಲ್ಲಿ ಸ್ಫರ್ದಿಸಿದ ನೀರಜ್ ಮೊದಲ ಪ್ರಯತ್ನದಲ್ಲೇ 86.65 ಮೀಟರ್ ದೂರದ ಸಾಧನೆ ಮಾಡಿದರು.
ಈ ವಿಭಾಗದಲ್ಲಿ ವಿಶ್ವದ ನಂಬರ್ ಒನ್ ಜರ್ಮನಿಯ ಜೊಹಾನ್ಸ್ ವೆಟರ್ 82.04 ಮೀಟರ್ ಸಾಧನೆ ಮಾಡಿದರು.
ಆದರೆ, ನೀರಜ್ ಮೊದಲ ಪ್ರಯತ್ನದಲ್ಲೇ ಅತ್ಯುತ್ತಮ ಪ್ರದರ್ಶನ ತೋರಿ ಫೈನಲ್ ಹಂತಕ್ಕೆ ನೇರ ಪ್ರವೇಶ ಪಡೆದುಕೊಂಡಿದ್ದಾರೆ.
ಫೈನಲ್ ಪಂದ್ಯ ಆಗಸ್ಟ್ 7 ರಂದು ನಡೆಯಲಿದ್ದು ಭಾರತ ಮತ್ತೊಂದು ಪದಕದ ನಿರೀಕ್ಷೆಯಲ್ಲಿದೆ.
ನೀರಜ್ ಈ ಹಿಂದೆ ಗೋಲ್ಡ್ಕೋಸ್ಟ್ನಲ್ಲಿ ನಡೆದಿದ್ದ ಕಾಮನ್ವೆಲ್ತ್ ಮತ್ತು ಜಕಾರ್ತದಲ್ಲಿ ಜರುಗಿದ್ದ ಏಷ್ಯನ್ ಕ್ರೀಡಾಕೂಟಗಳಲ್ಲಿ ಚಿನ್ನ ಗೆದ್ದ ಸಾಧನೆ ಮಾಡಿದ್ದರು.
- ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!
- ಕರ್ನಾಟಕ ಸೇರಿದಂತೆ 14 ರಾಜ್ಯಗಳಲ್ಲಿ 2 ದಿನ ಭಾರೀ ಮಳೆಯ ಮುನ್ಸೂಚನೆ
- ನಂಬುಗೆಯೇ ಇಂಬು
- KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
- Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
More Stories
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!
ಕರ್ನಾಟಕ ಸೇರಿದಂತೆ 14 ರಾಜ್ಯಗಳಲ್ಲಿ 2 ದಿನ ಭಾರೀ ಮಳೆಯ ಮುನ್ಸೂಚನೆ
ನಂಬುಗೆಯೇ ಇಂಬು