ರಾಜ್ಯದಲ್ಲಿ ಇತ್ತೀಚೆಗೆ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ನಾಳೆ (ಶನಿವಾರ) ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಈಗಾಗಲೇ ಪರೀಕ್ಷೆಯ ಮೌಲ್ಯಮಾಪನ ಮುಕ್ತಾಯಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಬೋರ್ಡ್ ನಿರ್ದೇಶಕಿ ವಿ. ಸುಮಂಗಲ ನಿನ್ನೆ ಫಲಿತಾಂಶದ ಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ ಅವರಿಗೆ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚೆ ನಡೆಸಿದ ನಂತರ ನಾಳೆ ಫಲಿತಾಂಶ ಪ್ರಕಟಿಸಲು ತೀರ್ಮಾನ ತೆಗೆದುಕೊಳ್ಳಲಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ.
ಕಳೆದ ತಿಂಗಳ ೧೯ ಮತ್ತು ೨೨ ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆದಿತ್ತು. ಕೊರೊನಾದ ಪರಿಣಾಮ ಪರೀಕ್ಷೆಯ ಅವಧಿಯನ್ನು ಎರಡು ದಿನಕ್ಕೆ ಸೀಮಿತಗೊಳಿಸಲಾಗಿತ್ತು. ಅಂದಿನ ಶಿಕ್ಷಣ ಸಚಿವರಾಗಿದ್ದ ಸುರೇಶ್ ಕುಮಾರ್ ಅವರು ಫಲಿತಾಂಶವನ್ನು ಆ. ೧೦ರೊಳಗೆ ಪ್ರಕಟಿಸಲಾಗುವುದೆಂದು ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು
- ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ
- ಸಿ.ಟಿ. ರವಿ ಮೇಲೆ ಹಲ್ಲೆ: ಕೊಲೆಗೆ ಸಂಚು ರೂಪಿಸಿದ್ದಾರೆಂದು ಆರೋಪ
- ಮಂಡ್ಯ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ
- 4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ – ಬಂಧನ
- ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪರವರಿಗೆ ಅದ್ಧೂರಿ ಸ್ವಾಗತ
More Stories
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ
ಸಿ.ಟಿ. ರವಿ ಮೇಲೆ ಹಲ್ಲೆ: ಕೊಲೆಗೆ ಸಂಚು ರೂಪಿಸಿದ್ದಾರೆಂದು ಆರೋಪ
ಮಂಡ್ಯ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ