ಕೊರೊನಾ ಮೂರನೇ ಅಲೆ ಭೀತಿ ಇದ್ದರೂ ವಿಶ್ವ ವಿಖ್ಯಾತಿಯ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿಯೂ ಸರಳವಾಗಿ ಆಚರಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಸರಳ ದಸರಾ ಆಚರಣೆ ಸಂಬAಧ ರೂಪುರೇಷೆ ಸಿದ್ಧಪಡಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ. ಇದಾದ ನಂತರ ಮುಖ್ಯಮಂತ್ರಿಗಳ ಗಮನಕ್ಕೆ ಈ ವಿಷಯ ತಂದು ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಸಹಕಾರ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್ ತಿಳಿಸಿದರು.
ಎಚ್.ಡಿ.ಕೋಟೆ ತಾಲ್ಲೂಕು ಬಾವಲಿ ಚೆಕ್‌ಪೋಸ್ಟ್ ಪರಿಶೀಲನೆ ಸಮಯದಲ್ಲಿ ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿದರು. ಕಳೆದ ವರ್ಷ ದಸರಾಗೆಂದು ಮಂಜೂರಾಗಿದ್ದ ೧೦ ಕೋಟಿ ರು. ಪೈಕಿ ೭.೫ ಕೋಟಿರು. ಉಳಿದಿದೆ. ಮುಖ್ಯಮಂತ್ರಿಗಳ ಅನುಮೋದನೆ ಪಡೆದ ನಂತರ ಈ ಉಳಿಕೆ ಹಣವನ್ನು ಬಳಸಿಕೊಳ್ಳಲಾಗುವುದು. ಯಾವ ಕಾರಣಕ್ಕೂ ಈ ವರ್ಷ ದಸರಾ ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್