ತಮಗೆ ಸಚಿವ ಸ್ಥಾನ ತಪ್ಪಿದ್ದಕ್ಕೆ ತೀವ್ರ ಅತೃಪ್ತರಾಗಿರುವ ಮೈಸೂರು ಕೆ.ಆರ್. ಕ್ಷೇತ್ರದ ಶಾಸಕ ಎಸ್. ಎ. ರಾಮದಾಸ್, ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ತಾವು ಹಿಂದೆ ಹೇಳಿದಂತೆ ಮುಚ್ಚಿದ್ದ ಲಕೋಟೆಯನ್ನು ನೀಡಿದ್ದಾರೆ.
ಕಳೆದ ಸೋಮವಾರ ಸಿಎಂ ಮೈಸೂರಿಗೆ ಭೇಟಿ ನೀಡಿದಾಗ ಅವರನ್ನು ಸ್ವಾಗತಿಸಲು ರಾಮದಾಸ್ ಬಂದಿರಲಿಲ್ಲ ಹಾಗೂ ಅವರ ಯಾವುದೇ ಕಾರ್ಯಕ್ರಮಗಳಲ್ಲೂ ಭಾಗವಹಿಸಿರಲಿಲ್ಲ. ಈ ಬಗ್ಗೆ ಕೇಳಿದ ಪ್ರಶ್ನೆಗೆ, ತಾವು ಯಾವುದೇ ವಿಷಯವನ್ನು ಬಹಿರಂಗವಾಗಿ ಹೇಳುವುದಿಲ್ಲ. ತಮ್ಮ ಅನಿಸಿಕೆಯನ್ನು ಮುಚ್ಚಿದ ಲಕೋಟೆಯಲ್ಲಿ ಮುಖ್ಯಮಂತ್ರಿಗೆ ನೀಡುವುದಾಗಿ ಅಂದುಪ್ರತಿಕ್ರಿಯಿಸಿದ್ದರು.
ಇಂದು ಲಕೋಟೆ ನೀಡಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ರಾಜ್ಯದ ಮತ್ತು ಪಕ್ಷದ ಹಿತದೃಷ್ಟಿಯಿಂದ ಕೆಲವು ವಿಷಯ ಚರ್ಚಿಸಲಾಗಿದೆ. ಸಮಯ ದೊರೆತಾಗ ಲಕೋಟೆಯಲ್ಲಿರುವ ಪತ್ರ ಓದಿ ಎಂದು ಮುಖ್ಯಮಂತ್ರಿಗೆ ಹೇಳಿದ್ದಾಗಿ ಶಾಸಕರು ತಿಳಿಸಿದರು. ಇತ್ತ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಅವರೂ ಆರ್.ಟಿ.ನಗರದಲ್ಲಿರುವ ಬೊಮ್ಮಾಯಿ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ