ಅಫ್ಘಾನಿಸ್ತಾನದ ಕಾಬೂಲ್ ನಗರವನ್ನು ತಾಲಿಬಾನ್ ಉಗ್ರರು ಭಾನುವಾರ ತಮ್ಮ ವಶಕ್ಕೆ ಪಡೆದುಕೊಂಡರು. ಕಾಬೂಲ್ ಅನ್ನು ತಾಲಿಬಾನ್ ಉಗ್ರರಿಗೆ ಯಾವುದೇ ಪ್ರತಿ ರೋಧವಿಲ್ಲದೇ ಶಾಂತಿಯುತ ವಾಗಿ ಹಸ್ತಾಂತರ ಮಾಡಲಾಗಿದೆ ಎಂದು ಅಫ್ಘಾನಿಸ್ತಾನದ ಒಳಾಡಳಿತ ಸಚಿವರು ತಿಳಿಸಿದ್ದಾರೆ.
ಈ ಅಫ್ಘಾನಿಸ್ತಾನದ ಕಾಬೂಲ್ ನ ಪೋಲಿಸ್ ಮುಖ್ಯಸ್ಥರನ್ನು ಉಗ್ರರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಈ ನಡುವೆ ಅಫ್ಘಾನಿಸ್ತಾನದ ಎಲ್ಲಾ ಗಡಿ ಮಾರ್ಗಗಳನ್ನು ತಾಲಿಬಾನ್ ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ.
ದೇಶದ ಬಹುತೇಕ ಭಾಗವನ್ನು ಈಗಾಗಲೇ ತನ್ನ ವಶಕ್ಕೆ ತೆಗೆದುಕೊಂಡಿರುವ ತಾಲಿಬಾನಿಗಳು ಭಾನುವಾರ ಬೆಳಿಗ್ಗೆಯಷ್ಟೇ ಜಲಾಲಾಬಾದ್, ಕಾಬೂಲ್ ಸೇರಿದಂತೆ ಇತರ ಪ್ರಮುಖ ನಗರವನ್ನು ಯಾವುದೇ ಪ್ರತಿರೋಧವಿಲ್ಲದೇ ಅನಾಯಾಸವಾಗಿ ನಿಯಂತ್ರಣಕ್ಕೆ ತೆಗೆದುಕೊಂಡಿದ್ದರು.
ಸದ್ಯದ ಮಾಹಿತಿ ಪ್ರಕಾರ, ದೇಶದಿಂದ ಹೊರಹೋಗುವ ಎಲ್ಲಾ ಗಡಿ ಮಾರ್ಗಗಳನ್ನು ತಾಲಿಬಾನ್ ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ. ಕಾಬೂಲ್‌ನ ವಿಮಾನ ನಿಲ್ದಾಣ ಮಾತ್ರವೇ ಈಗ ದೇಶದಿಂದ ಹೊರ ಹೋಗಲು ಇರುವ ಏಕೈಕ ಮಾರ್ಗವಾಗಿ ಉಳಿದಿತ್ತು. ಅದನ್ನು ಈಗ ತಮ್ಮ ವಶಕ್ಕೆ ಪಡೆದುಕೊಂಡರು ಎಂದು ವರದಿಗಳು ಹೇಳಿವೆ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್