February 21, 2026

Newsnap Kannada

The World at your finger tips!

m r ravi

ಧ್ವಜಾರೋಹಣ ಮಾಡಿದ ಮೂರನೇ ಡಿಸಿ ಡಾ. ರವಿ

Spread the love

ಜಿಲ್ಲಾ ಉಸ್ತುವಾರಿ ಸಚಿವರು ಇಲ್ಲದ ಪರಿಣಾಮ ಚಾಮರಾಜನಗರದಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿ ಡಾ. ಎಂ ಆರ್ ರವಿ ಧ್ವಜಾರೋಹಣ ನೆರವೇರಿಸಿದ ಮೂರನೆ ಡಿಸಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ

ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ. ಈ ಹಿಂದೆ ರಾಷ್ಟ್ರಪತಿ ಆಡಳಿತದ ಹಿನ್ನೆಲೆಯಲ್ಲಿ ಚಾಮರಾಜನಗರದ ಅಂದಿನ ಡಿಸಿ ಹರ್ಷಗುಪ್ತ ಧ್ವಜಾರೋಹಣ ಮಾಡಿದ್ದರು.

ಜಿಲ್ಲಾ ಉಸ್ತುವಾರಿ ಸಚಿವರು ನೇಮಕವಾಗದ ಕಾರಣ ಡಿಸಿಯಾಗಿದ್ದ ಬಿ.ಬಿ. ಕಾವೇರಿ ಧ್ವಜಾರೋಹಣ ನೆರವೇರಿಸಿದ್ದರು.

ಈಗ 75 ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭವಾದ ಇಂದು ಜಿಲ್ಲಾ ಉಸ್ತುವಾರಿ ಸಚಿವರು ಇಲ್ಲದ ಕಾರಣ ಸ್ವಾತಂತ್ರ್ಯ ದಿನಾಚರಣೆಯ ಅಮೃತಮಹೋತ್ಸವದಂದು ಧ್ವಜಾರೋಹಣ ನೆರವೇರಿಸುವ ಭಾಗ್ಯ ಜಿಲ್ಲಾಧಿಕಾರಿ ಡಾ. ರವಿಗೆ ಒಲಿದು ಬಂತು.

error: Content is protected !!