ಉಡುಪಿಯ ಕೇದಾರೋತ್ಥಾನ ಟ್ರಸ್ಟ್ ಮಾಡುತ್ತಿರುವ ಹಡಿಲು ಗದ್ದೆ ಕೃಷಿ ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ಜನಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಕಡೆಕಾರು ಗದ್ದೆಯ ಕೃಷಿ ಚಟುವಟಿಕೆಯಲ್ಲಿ ಭಾಗವಹಿಸಿದ್ದರು.
ಕೇದಾರೋತ್ಥಾನ ಟ್ರಸ್ಟ್, ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ 3,000 ಎಕರೆ ಗದ್ದೆಯಲ್ಲಿ ಈ ಬಾರಿ ಬೇಸಾಯ ಮಾಡುತ್ತಿದೆ.
ಉಡುಪಿ ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಕಳೆದ ನಾಲ್ಕು ತಿಂಗಳಿನಿಂದ ಈ ಅಭಿಯಾನ ನಡೆಯುತ್ತಿದೆ. ಕಡೆಕಾರು ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಈಗಾಗಲೇ ನಾಟಿ ಕಾರ್ಯ ಮುಗಿಸಿದೆ. ಕಾಲೇಜು ವಿದ್ಯಾರ್ಥಿಗಳು ಕಳೆ ತೆಗೆಯುವ ಕೆಲಸದಲ್ಲಿ ತೊಡಗಿದ್ದಾರೆ. ಈ ಚಟುವಟಿಕೆಯಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಪಾಲ್ಗೊಂಡು ವಿದ್ಯಾರ್ಥಿಗಳು, ಶಾಸಕರ ಜೊತೆ ಗದ್ದೆಗಿಳಿದು ಕಳೆ ಕಿತ್ತಿದ್ದಾರೆ.
ಈ ವೇಳೆ ಮಾತನಾಡಿದ ಸಚಿವೆ ಶೋಭಾ, ರೈತರ ಕಷ್ಟ ಏನು ಎಂಬುದು ನನಗೆ ಸರಿಯಾಗಿ ಗೊತ್ತಿದೆ. ನಾಟಿ ಮಾಡಿ ಬೆಳೆ ಮಾರಾಟ ಆಗುವ ತನಕ, ಗ್ರಾಹಕರಿಗೆ ಕೈಸೇರುವ ತನಕ ಸಾಕಷ್ಟು ಸವಾಲುಗಳನ್ನು ರೈತರು, ಎದುರಿಸುತ್ತಾರೆ. ದೇಶದ ಬೆನ್ನೆಲುಬಾಗಿರುವ ರೈತರ ಕಷ್ಟ, ನಷ್ಟ ಅರಿತುಕೊಳ್ಳುವ ಕೆಲಸ ಮಾಡುತ್ತೇನೆ. ಹಡಿಲು ಗದ್ದೆ ಅಭಿಯಾನ ಉತ್ತಮ ಯೋಜನೆ. ರಾಜ್ಯ, ದೇಶದ ಜನ ಇದಕ್ಕೆ ಕೈ ಜೋಡಿಸಬೇಕು ಎಂದಿದ್ದಾರೆ.
- ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ
- ಕಾಪರ್ ಏಜ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್ ಆತ್ಮಹತ್ಯೆ: ಕಾರಣ ನಿಗೂಢ
- 104ರನ್ಗೆ ಆಸ್ಟ್ರೇಲಿಯಾ ಆಲೌಟ್ ,ಬುಮ್ರಾಗೆ 5 ವಿಕೆಟ್
- ಚನ್ನಪಟ್ಟಣ: 4 ನೇ ಸುತ್ತಿನಲ್ಲಿ ನಿಖಿಲ್ ಕುಮಾರಸ್ವಾಮಿ ಮುನ್ನಡೆ
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
More Stories
ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ
ಕಾಪರ್ ಏಜ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್ ಆತ್ಮಹತ್ಯೆ: ಕಾರಣ ನಿಗೂಢ
104ರನ್ಗೆ ಆಸ್ಟ್ರೇಲಿಯಾ ಆಲೌಟ್ ,ಬುಮ್ರಾಗೆ 5 ವಿಕೆಟ್