February 22, 2026

Newsnap Kannada

The World at your finger tips!

168

ಅಫ್ಘಾನಿಸ್ತಾನದಿಂದ 168 ಮಂದಿ ಸುರಕ್ಷಿತವಾಗಿ ಭಾರತಕ್ಕೆ ವಾಪಸ್ಸು

Spread the love

ಅಫ್ಘಾನಿಸ್ತಾನದಲ್ಲಿ ಹಿಂಸಾಚಾರ ಅತಿರೇಕಕ್ಕೆ ತಿರುಗಿದೆ.‌‌ ಹೀಗಾಗಿ ಭಾನುವಾರ ಬೆಳಿಗ್ಗೆ ಭಾರತೀಯ ವಾಯು ಸೇನೆಯ ಸಿ -17 ವಿಮಾನದ ಮೂಲಕ 107 ಭಾರತೀಯರು ಸೇರಿ ಒಟ್ಟು 168 ಜನರನ್ನು ಅಫ್ಘಾನಿಸ್ತಾನದಿಂದ ಭಾರತಕ್ಕೆ ಕರೆ ತರಲಾಗಿದೆ.

ಭಾರತೀಯ ಸೇನೆಯ ವಿಮಾನದ ಮೂಲಕ ಕಾಬೂಲ್‍ನಿಂದ ಹಿಂಡನ್ ಏರ್ ಫೋರ್ಸ್ ಬೇಸ್‍ನ ಗಾಜಿಯಾಬಾದ್‍ಗೆ ಕರೆತರಲಾಗಿದೆ.

ವಿದೇಶಾಂಗ ಸಚಿವಾಲಯದ ಅರಿಂದಮ್ ಬಾಗ್ಚಿ ಅವರು ಈ ಕುರಿತು ಟ್ವೀಟ್ ಮಾಡಿ ಖಚಿತಪಡಿಸಿದ್ದಾರೆ.

ಸ್ಥಳಾಂತರಿಸುವ ಕಾರ್ಯ ಮುಂದುವರಿದಿದೆ. ಭಾರತೀಯ ವಾಯು ಸೇನೆಯ ವಿಶೇಷ ವಿಮಾನದ ಮೂಲಕ 107 ಭಾರತೀಯರು ಸೇರಿ ಒಟ್ಟು 168 ಜನರು ಭಾರತಕ್ಕೆ ಬಂದಿಳಿದಿದ್ದಾರೆ ಎಂದಿದ್ದಾರೆ.

ಇದೇ ವೇಳೆ ಅಫ್ಘಾನಿಸ್ತಾನದ ಸಂಸದ ನರೇಂದ್ರ ಸಿಂಗ್ ಖಲ್ಸಾ ಅವರು ಕಾಬೂಲ್‍ನಿಂದ ಭಾರತಕ್ಕೆ ಲ್ಯಾಂಡ್ ಆಗುತ್ತಿದ್ದಂತೆ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ.

ನನಗೆ ಅಳು ಬರುತ್ತಿದೆ. ಕಳೆದ 20 ವರ್ಷಗಳಿಂದ ನಾವು ಸಂಪಾದಿಸಿದ ಎಲ್ಲವನ್ನೂ ಕಳೆದುಕೊಂಡಿದ್ದೇವೆ. ಇದೀಗ ಝೀರೋ ಆಗಿದ್ದೇವೆ ಎಂದು ಹೇಳಿದ್ದಾರೆ.

error: Content is protected !!