ಮೈಸೂರು ಪಾಲಿಕೆ ಇತಿಹಾಸದಲ್ಲಿ ಮೊದಲ ಬಾರಿಗೆ ಬಿಜೆಪಿ ಮೇಯರ್ ಕಿರೀಟವನ್ನು ಮುಡಿಗೇರಿಸಿಕೊಂಡಿದೆ.
ಮೈಸೂರು ಮಾಹಾನಗರ ಪಾಲಿಕೆ ನೂತನ ಮೇಯರ್ ಆಗಿ ಬಿಜೆಪಿ ಸದಸ್ಯೆ ಸುನಂದಾ ಪಾಲನೇತ್ರ ಆಯ್ಕೆಯಾಗಿದ್ದಾರೆ. ಸುನಂದಾ ಪಾಲನೇತ್ರ ಬಿ.ಎಸ್ ಯಡಿಯೂರಪ್ಪ ಸಂಬಂಧಿಯೂ ಆಗಿದ್ದಾರೆ.
ಮೈಸೂರು ಪಾಲಿಕೆ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮೇಯರ್ ಸ್ಥಾನ ಬಿಜೆಪಿಗೆ ಲಭಿಸಿದೆ. ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಪರ ಮತದಾನ ಮಾಡಿದ ಕಾಂಗ್ರೆಸ್ ಸದಸ್ಯರು ಬಳಿಕ ಸಭಾ ತ್ಯಾಗ ಮಾಡಿ, ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ದೂರಿದರು.
ಪಾಲಿಕೆ ಮೇಯರ್ ಚುನಾವಣೆಗೆ ಬುಧವಾರ ಬೆಳಗ್ಗೆ ಮೂರು ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದರು.
ಕಾಂಗ್ರೆಸ್ ಅಭ್ಯರ್ಥಿಯಾಗಿ 32ನೇ ವಾರ್ಡಿನ ಸದಸ್ಯೆ ಹೆಚ್.ಎಂ. ಶಾಂತಕುಮಾರಿ, ಜೆಡಿಎಸ್ನಿಂದ 37ನೇ ವಾರ್ಡಿನ ಅಶ್ವಿನಿ ಆರ್ ಅನಂತು ಹಾಗೂ ಬಿಜೆಪಿ ಅಭ್ಯರ್ಥಿಯಾಗಿ 59ನೇ ವಾರ್ಡ್ ನ ಸುನಂದಾ ಪಾಲನೇತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರು.
ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದ ಕಾರಣ ಚುನಾವಣೆ ತೀವ್ರ ಕುತೂಹಲ ಮೂಡಿಸಿತ್ತು.
ಕಾಂಗ್ರೆಸ್ ಬೆಂಬಲಿಸದ ಜೆಡಿಎಸ್ :
ಕಳೆದ ಬಾರಿ ಮೈತ್ರಿ ಮಾಡಿಕೊಂಡು ಅಧಿಕಾರ ಪಡೆದುಕೊಂಡಿದ್ದ ಕಾಂಗ್ರೆಸ್, ಜೆಡಿಎಸ್ಗಳ ಮೈತ್ರಿ ಮುರಿದು ಬಿದ್ದಿದ್ದು, ಕಾಂಗ್ರೆಸ್ ಸದಸ್ಯರ ಅಸಮಾಧಾನಕ್ಕೆ ಕಾರಣವಾಗಿದೆ. ಒಟ್ಟು 72 ಮತಗಳಲ್ಲಿ ಬಿಜೆಪಿ ಅಭ್ಯರ್ಥಿ ಸುನಂದಾ ಪಾಲನೇತ್ರ 25 ಮತ, ಕಾಂಗ್ರೆಸ್ನ ಹೆಚ್.ಎಂ. ಶಾಂತಕುಮಾರಿ 20, ಜೆಡಿಎಸ್ ಪಕ್ಷದ ಅಶ್ವಿನಿ ಆರ್ ಅನಂತು ಮತ 21 , ಇತರೆ 6 ಮತ ಪಡೆದುಕೊಂಡಿದ್ದಾರೆ.
- KPSC ಪರೀಕ್ಷೆಗಳಲ್ಲಿ ಕನ್ನಡ ದೋಷಗಳ ವಿವಾದ – ಮರುಪರೀಕ್ಷೆಗೆ ಪ್ರಬಲ ಒತ್ತಾಯ
- ಮಂಡ್ಯ ರೈತರನ್ನು ಕಾಡುತ್ತಿರುವ ವಕ್ಫ್ ಭೂಮಿ ವಿವಾದ
- ಪ್ರತಿಸ್ಪಂದಿಸಿ ಆದರೆ ಪ್ರತಿಕ್ರಿಯಿಸಬೇಡಿ
- ಮರಿಚೀಕೆಯಾಗದಿರು ಒಲವೇ
- ಯುವಕರಿಗಾಗಿ ವಿವೇಕವಾಣಿ
More Stories
KPSC ಪರೀಕ್ಷೆಗಳಲ್ಲಿ ಕನ್ನಡ ದೋಷಗಳ ವಿವಾದ – ಮರುಪರೀಕ್ಷೆಗೆ ಪ್ರಬಲ ಒತ್ತಾಯ
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
MUDA ಹಗರಣ: ಜೆಡಿಎಸ್ ಶಾಸಕ ಜಿಟಿಡಿ ವಿರುದ್ಧ ಕಿಕ್ಬ್ಯಾಕ್ ಆರೋಪ, ಲೋಕಾಯುಕ್ತದಲ್ಲಿ ದೂರು