ಅಂದು ಆಗಸ್ಟ್ 24ರ ಸಂಜೆ 7.25 ರಿಂದ 7.30ರ ಸುಮಾರಿಗೆ ನಾನು ಸಂತ್ರಸ್ತ ಯುವತಿ ತರಗತಿ ಮುಗಿಸಿಕೊಂಡು ಜೆಎಸ್‌ಎಸ್ ಆಯುರ್ವೇದಿಕ್ ಕಾಲೇಜಿನ ಮುಂದೆ ವಾಟರ್ ಟ್ಯಾಂಕ್ ಬಳಿಯ ಕಚ್ಚಾ ರಸ್ತೆಯಲ್ಲಿ ಹೋಗುತ್ತಿದ್ದೆವು.
ನಾನು ಯಾವಾಗಲೂ ಜಾಗಿಂಗ್‌ಗೆ ಹೋಗುವ ಸ್ಥಳ ಅದಾಗಿತ್ತು. ಅಲ್ಲಿ ಹೋಗಿ ಬೈಕ್ ನಿಲ್ಲಿಸಿದಾಗ 25 ರಿಂದ 30 ವರ್ಷದ ಸುಮಾರು 6 ಮಂದಿ ನಮ್ಮ ಬಳಿ ಆಗಮಿಸಿ ನಮ್ಮ ಜೊತೆ ಹೇಗೆ ನಡೆದುಕೊಂಡರು ….
ಇದು ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಯುವತಿ ಸ್ನೇಹಿತ ಪೊಲೀಸರಿಗೆ ನೀಡಿದ ಹೇಳಿಕೆಯ ವಿವರ ನೀಡಿದ್ದಾರೆ.
ನನ್ನ ಬಲ ಭಾಗದಿಂದ ಏಕಾಏಕಿ ಬಂದು ದೊಣ್ಣೆಯಿಂದ ಹಲ್ಲೆ ಮಾಡಿದರು. ನಂತರ ನನ್ನನ್ನು ತಳ್ಳಿ ಜೊತೆಯಲ್ಲಿದ್ದವಳನ್ನು ಪೊದೆಗಳಿರುವ ಜಾಗಕ್ಕೆ ಎಳೆದುಕೊಂಡು ಹೋದರು.
ತೆಳ್ಳಗಿರುವ ಒಬ್ಬ ನನ್ನ ಹಣೆಗೆ ಕಲ್ಲಿನಿಂದ ಹೊಡೆದ. ಹೊಡೆದ ಪರಿಣಾಮ ನಾನು ಪ್ರಜ್ಞೆ ತಪ್ಪಿ ಬಿದ್ದಿದ್ದು, 15 ನಿಮಿಷದ ನಂತರ ಪ್ರಜ್ಞೆ ಬಂತು. ಆಗ 4 ಜನ ನನ್ನ ಮುಂದೆ ನಿಂತು ನನ್ನ ತಂದೆಗೆ ಕಾಲ್ ಮಾಡಿಸಿದರು. 3 ಲಕ್ಷ ಹಣ ಕೊಡುವಂತೆ ಒತ್ತಾಯ ಮಾಡಿದರು ಎಂದು ಹೇಳಿಕೆ ದಾಖಲಿಸಿದ್ದಾನೆ.
ನಾನು ಗೆಳತಿ ಎಲ್ಲಿ ಎಂದು ಕೇಳಿದಾಗ ಇಬ್ಬರೂ ಆಕೆಯನ್ನು ಎಳೆದುಕೊಂಡು ಬಂದು ನನ್ನ ಪಕ್ಕ ಕೂರಿಸಿದರು. ಅಷ್ಟೊತ್ತಿಗೆ ಸಂತ್ರಸ್ತ ಯುವತಿ ತೀವ್ರವಾಗಿ ಗಾಯಗೊಂಡು ನಿತ್ರಾಣ ಸ್ಥಿತಿ ತಲುಪಿದ್ದಳು. ಅವಳಿಗೆ ತರಚಿದ ಗಾಯಗಳಾಗಿದ್ದವು. ಎಂದು ಸಂತ್ರಸ್ತ ಯುವತಿ ಸ್ನೇಹಿತ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ ಎನ್ನಲಾಗಿದೆ.
More Stories
ಹಣ ಡಬ್ಲಿಂಗ್ ಹೆಸರಲ್ಲಿ 2 ಕೋಟಿ ರೂಪಾಯಿ ವಂಚನೆ: 7 ಮಂದಿ ಬಂಧನ
ಹಸುಗಳ ಕೆಚ್ಚಲು ಕೊಯ್ದಆರೋಪಿ ಬಂಧನ : ಜ.24 ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶ
ಹುಟ್ಟುಹಬ್ಬದ ದಿನವೇ ಬಾಲಕನ ದುರ್ಮರಣ