ಮೇಕೆದಾಟು ಯೋಜನೆಗೆ ಕರ್ನಾಟಕದೊಂದಿಗೆ ಪದೇ ಪದೇ ಕ್ಯಾತೆ ತೆಗೆಯುವ ತಮಿಳುನಾಡು ಸರ್ಕಾರ ಇದೀಗ ಮತ್ತೊಂದು ಅಡ್ಡಿಗೆ ಮುಂದಾಗಿದೆ.
ಕೇಂದ್ರದ ಅನುಮೋದನೆಗಾಗಿ ಸಲ್ಲಿಸಿರುವ ವಿಸ್ತೃತ ಯೋಜನಾ ವರದಿ (ಡಿಪಿಆರ್) ತಿರಸ್ಕರಿಸಲು ಸುಪ್ರೀಂಕೋರ್ಟ್‍ಗೆ ತಮಿಳುನಾಡು ಸರ್ಕಾರ ಅರ್ಜಿ ಸಲ್ಲಿಸಿ ಮತ್ತೆ ಕ್ಯಾತೆ ತೆಗೆದಿದೆ.
ಮೇಕೆದಾಟು ಆಣೆಕಟ್ಟು ನಿರ್ಮಾಣ ವಿಚಾರವಾಗಿ ಕರ್ನಾಟಕ ಇದೀಗ ಯೋಜನೆಯನ್ನು ನಾವು ಆರಂಭಿಸುತ್ತೇವೆ ಎಂದು ಪಟ್ಟುಹಿಡಿದಿದೆ. ಈಗಾಗಲೇ ಮೇಕೆದಾಟು ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವ ಯೋಜನೆ ಆಗಿದ್ದು, ಶೀಘದಲ್ಲೇ ಕೇಂದ್ರದ ಜೊತೆ ಅನುಮತಿ ಪಡೆದು ಯೋಜನೆ ಆರಂಭಿಸುತ್ತೇವೆ ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಇವೆಲ್ಲದರ ನಡುವೆ ತಮಿಳುನಾಡು ಸರ್ಕಾರ ತುರ್ತು ವಿಚಾರಣೆ ಕೋರಿ ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಿದೆ. ಅರ್ಜಿಯಲ್ಲಿ ಡಿಪಿಆರ್ ತಿರಸ್ಕರಿಸಲು ಸೂಚಿಸುವಂತೆ ಮನವಿ ಮಾಡಿಕೊಂಡಿದೆ.
ಮನವಿಯಲ್ಲಿ ಪ್ರಮುಖ ಅಂಶಗಳು :
” 9,000 ಕೋಟಿ ವೆಚ್ಚದಲ್ಲಿ 76.16 ಟಿಎಂಸಿ ನೀರು ಸಂಗ್ರಹಣೆ ಉದ್ದೇಶದಿಂದ ಜಲಾಶಯ ನಿರ್ಮಿಸಲು ಕರ್ನಾಟಕ ಮುಂದಾಗಿದೆ.
- ವಿದ್ಯುತ್ ಉತ್ಪಾದನೆಯನ್ನು ಮಾಡಲು ಕರ್ನಾಟಕ ಯೋಜನೆ ರೂಪಿಸಿದೆ.
- ಈ ಯೋಜನೆ ನ್ಯಾಯಲಯದ ಆದೇಶ ಉಲ್ಲಂಘಿಸಿದೆ.
- ಈ ಯೋಜನೆಗೆ ಕೂಡಲೇ ತಡೆ ನೀಡಬೇಕು. ಕರ್ನಾಟಕಕ್ಕೆ ಯಥಾಸ್ಥಿತಿ ಕಾಯ್ದುಕೊಳ್ಳಲು ಸೂಚಿಸಬೇಕು.
- ಕರ್ನಾಟಕ ಸಲ್ಲಿಸಿರುವ ಡಿಪಿಆರ್ ನ್ನು ಕೇಂದ್ರ ಜಲ ಆಯೋಗ (ಸಿಡಬ್ಲ್ಯೂಸಿ) ತಿರಸ್ಕರಿಸಲು ಸೂಚಿಸಬೇಕು ಪ್ರಕರಣ ಅಂತ್ಯವಾಗುವವರೆಗೂ ಅರಣ್ಯ ಮತ್ತು ಪರಿಸರ ಇಲಾಖೆಯಿಂದ ಯಾವುದೇ ಅನುಮತಿ ನೀಡದಂತೆ ಸೂಚಿಸಬೇಕು.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
- ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ
- ಕಾಪರ್ ಏಜ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್ ಆತ್ಮಹತ್ಯೆ: ಕಾರಣ ನಿಗೂಢ
- 104ರನ್ಗೆ ಆಸ್ಟ್ರೇಲಿಯಾ ಆಲೌಟ್ ,ಬುಮ್ರಾಗೆ 5 ವಿಕೆಟ್
More Stories
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ