ಗಣೇಶ ಹಬ್ಬ ಇರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಪ್ರಾಥಮಿಕ ಶಾಲೆ (1 ರಿಂದ 5) ಗಳನ್ನು ಆರಂಭಿಸುವ ಬಗ್ಗೆ ಯಾವುದೇ ಚಿಂತನೆ ಇಲ್ಲ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ಸದ್ಯ ಪ್ರಾಥಮಿಕ ಶಾಲೆ ಆರಂಭದ ಚಿಂತನೆಯೇ ಇಲ್ಲ. ಕೇರಳದಲ್ಲಿ ಕೊರೊನಾ ಏರಿಕೆ ಹಾಗೂ ಅಲ್ಲಿನ ವಿದ್ಯಾರ್ಥಿಗಳಿಂದ ರಾಜ್ಯದಲ್ಲಿ ಕೊವಿಡ್ ಕೇಸ್ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಸದ್ಯ 6 ತರಗತಿ ಯಿಂದ ಪ್ರಾಯೋಗಿಕ ಪ್ರಯತ್ನ ಮಾಡುತ್ತಾ ಇದ್ದೀವಿ ಅಷ್ಟೇ. ಪ್ರಾಥಮಿಕ ಶಾಲೆಗಳಾದ 1 ರಿಂದ 5 ರವರೆಗೆ ತೆರೆಯಲು ಚಿಂತನೆ ಇಲ್ಲ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ 1ರಿಂದ 5ನೆ ತರಗತಿಯವರೆಗೆ ಶಾಲೆ ಆರಂಭಿಸುವ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಸದ್ಯ ಅಂತಹ ಆಲೋಚನೆಗಳಿಲ್ಲ ಎಂದು ಸಹ ಅವರು ಸ್ಪಷ್ಟಪಡಿಸಿದರು.
2913 ಗ್ರಾಮ ಪಂಚಾಯತ್ ಗಳಲ್ಲಿ ಕೊವಿಡ್ ಪಾಸಿಟಿವಿಟಿ ಶೂನ್ಯವಿದೆ. 6472 ಮಕ್ಕಳ ಕೊವಿಡ್ ಸ್ಯಾಂಪಲ್ಗಳಲ್ಲಿ 12 ಮಕ್ಕಳಲ್ಲಿ ಮಾತ್ರ ಕೊವಿಡ್ ಪಾಸಿಟಿವ್ ಬಂದಿದೆ ಎಂದು ಅವರು ತಿಳಿಸಿದರು.
- ಮೈಸೂರು ಜೈಲಿನಲ್ಲಿ ಮೂವರು ಕೈದಿಗಳ ದುರ್ಮರಣ
- ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಮದುವೆ ಸಹಾಯಧನ: ₹60,000 ಪಡೆಯಲು ಅರ್ಜಿ ಆಹ್ವಾನ!
- ಮಾದಕ ವಸ್ತುಗಳ ಅಕ್ರಮ ಮಾರಾಟ: ಮೂವರು ಆರೋಪಿಗಳು ಬಂಧನ
- ಕೆನಡಾವನ್ನು ಅಮೆರಿಕಾದ 51ನೇ ರಾಜ್ಯವನ್ನಾಗಿ ಮಾಡಲು ಟ್ರಂಪ್ ಆರ್ಥಿಕ ಒತ್ತಡದ ಬೆದರಿಕೆ
- ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ: ಆದಾಯಕ್ಕಿಂತ ಅಧಿಕ ಆಸ್ತಿ ಆರೋಪ
More Stories
ಮೈಸೂರು ಜೈಲಿನಲ್ಲಿ ಮೂವರು ಕೈದಿಗಳ ದುರ್ಮರಣ
ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಮದುವೆ ಸಹಾಯಧನ: ₹60,000 ಪಡೆಯಲು ಅರ್ಜಿ ಆಹ್ವಾನ!
ಮಾದಕ ವಸ್ತುಗಳ ಅಕ್ರಮ ಮಾರಾಟ: ಮೂವರು ಆರೋಪಿಗಳು ಬಂಧನ