ಪ್ಯಾರಾಲಿಂಪಿಕ್ಸ್ನಲ್ಲಿ ಪುರುಷರ ಸಿಂಗಲ್ಸ್ ಬ್ಯಾಡ್ಮಿಂಟನ್ನಲ್ಲಿ ಸುಹಾಸ್ ಎಲ್ ಯತಿರಾಜ್ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ.
ಫೈನಲ್ ಪಂದ್ಯದಲ್ಲಿ ಫ್ರಾನ್ಸ್ನ ಲ್ಯೂಕಾಸ್ ಮಜೂರ್ ವಿರುದ್ಧ 21-15, 17-21, 15-21 ಸೆಟ್ಗಳಲ್ಲಿ ಸೋಲುಂಡರು.
ಉತ್ತರ ಪ್ರದೇಶದ ಗೌತಮ ನಗರ ಡಿಸಿ ಆಗಿರುವ ಸುಹಾಸ್ ಪ್ಯಾರಾಲಿಂಪಿಕ್ಸ್ನಲ್ಲಿ ಪದಕ ಗೆದ್ದ ಮೊದಲ ಐಎಎಸ್ ಅಧಿಕಾರಿ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿದ್ದಾರೆ.
ಕಂಪ್ಯೂಟರ್ ಎಂಜಿನಿಯರ್ ಆಗಿದ್ದ ಸುಹಾಸ್ ಅವರು, ಐಎಎಸ್ ಪಾಸ್ ಮಾಡಿ 2020ರಿಂದ ಗೌತಮ ನಗರ ಕರ್ತವ್ಯಕ್ಕೆ ನಿಯೋಜನೆಯಾಗಿದ್ದಾರೆ.
ಸುಹಾಸ್ ಕರ್ನಾಟಕದ ಮೂಲದ ಐಎಎಸ್ ಅಧಿಕಾರಿ. ಹಾಸನದಲ್ಲಿ ಜನಿಸಿದರು. ಶಿವಮೊಗ್ಗದಲ್ಲಿ ವಿದ್ಯಾ ಅಭ್ಯಾಸ ಮಾಡಿ, 2008ರಲ್ಲಿ ಐಎಎಸ್ ಅಧಿಕಾರಿಯಾಗಿ ಆಯ್ಕೆ ಯಾದರು. ಆಗ್ರಾ, ಪ್ರಯಾಗ್ ರಾಜ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದಾರೆ.
- ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಆಯುಕ್ತ ಮತ್ತು ಸಹಾಯಕ ಕಾರ್ಯಪಾಲಕ ಇಂಜಿನಿಯರ್
- ಕೊಡಗಿನಲ್ಲಿ ನಿರ್ಮಾಣಗೊಳ್ಳಲಿದೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ
- KSRTC ಬಸ್-ಲಾರಿ ನಡುವೆ ಡಿಕ್ಕಿ: ಐವರು ಸ್ಥಳದಲ್ಲೇ ಸಾವು
- ವರದಕ್ಷಿಣೆ ಕಿರುಕುಳ ತಾಳಲಾರದೇ ಮಹಿಳೆ ಆತ್ಮಹತ್ಯೆ – ಪತಿ ವಿಷ ಸೇವಿಸಿ ಆತ್ಮಹತ್ಯೆ ಯತ್ನ
- ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ
More Stories
ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ
ಅಮಿತ್ ಶಾ ಹೇಳಿಕೆ ವಿರೋಧಿಸಿ ಮೈಸೂರು-ಮಂಡ್ಯ ಬಂದ್: ವಾಹನ ಸಂಚಾರಕ್ಕೆ ಅಡಚಣೆ
ಕಾನ್ಸ್ಟೇಬಲ್ ನೇಮಕಾತಿ ದೈಹಿಕ ಪರೀಕ್ಷೆ: ಓಟದ ವೇಳೆ ಬಿದ್ದ ಯುವಕನ ದುರ್ಮರಣ