January 12, 2025

Newsnap Kannada

The World at your finger tips!

somshekar1

ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರಗಳಿಂದ ಈ ನೆಲ️ದ ಸಂಸ್ಕಾರ ಬಿ️ತ್ತುವ ಕೆಲ️ಸ: ಶ್ಲಾಘನೆ

Spread the love

ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರಗಳು ಶಿಕ್ಷಣದ ಜತೆಗೆ ಈ ನೆಲ️ದ ಸಂಸ್ಕಾರವನ್ನು ಎಳೆಯ ಮನಸ್ಸಿನಲ್ಲಿ ಬಿ️ತ್ತುವ ಕೆಲ️ಸವನ್ನು ಮಾಡುತ್ತಿವೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್ ಶ್ಲಾಘಿಸಿದರು.


ಮೈಸೂರು ವಿಜಯನಗರದ ೪ನೇ ಹಂತದಲ್ಲಿ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ ಶಾಲಾ ಕಟ್ಟಡದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದರು. ಅಂಕಗಳಿಷ್ಟೇ ಸೀಮಿತವಾಗುತ್ತಿರುವ ಇಂದಿನ ಶೈಕ್ಷಣಿಕ ಪದ್ಧತಿಯಲ್ಲಿ ವಿದೇಶಿ ಸಂಸ್ಕೃತಿ ಮೈಗೂಡುತ್ತಿದೆ. ಇಂತಹ ವೇಳೆ ನಮ್ಮ ಮಕ್ಕಳಲ್ಲಿ ಭಾರತೀಯ ಸಂಸ್ಕಾರ ಬೆಳೆಸುವ ಕಾರ್ಯದಲ್ಲಿ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರಗಳು ಮುಂದಾಗಿವೆ. ಇಂಥ ಕೆಲ️ಸಗಳು ಮತ್ತಷ್ಟು ನಡೆಯಲಿ ಎಂದು ಆಶಿಸಿದರು.


ಜನಜಾಗೃತಿ, ಜನಶಿಕ್ಷಣ, ಜನಸೇವೆ ಉದ್ದೇಶದಿಂದ ಆರಂಭಗೊAಡ ರಾಷ್ಟ್ರೋತ್ಥಾನ ಪರಿಷತ್ ಈಗಿನ ಯುವ ಪೀಳಿಗೆಯಲ್ಲಿ ರಾಷ್ಟ್ರೀಯ ವಿಚಾರಧಾರೆಗಳನ್ನು ತುಂಬುವ ಕೆಲ️ಸ ಮಾಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Copyright © All rights reserved Newsnap | Newsever by AF themes.
error: Content is protected !!