ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್ ಕೋರ್ಸ್ ಗಳ ಕಾಲೇಜು ಪ್ರವೇಶಕ್ಕೆ ಇರುವ 2020-21ನೇ ಸಾಲಿನ ನೀಟ್ (ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ) ದೇಶದಾದ್ಯಂತ ಇಂದು ನಡೆಯಲಿದೆ.
ನೀಟ್ ಪ್ರವೇಶ ಪರೀಕ್ಷೆ ಮಧ್ಯಾಹ್ನ 2 ರಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ.
ದೇಶಾದ್ಯಂತ 201 ಪ್ರಮುಖ ನಗರಗಳಲ್ಲಿ ಹಾಗೂ ಕರ್ನಾಟಕದ ಒಟ್ಟು 9 ನಗರಗಳಲ್ಲಿ ಪ್ರವೇಶ ಪರೀಕ್ಷೆ ನಡೆಯಲಿದೆ. ಬೆಂಗಳೂರು, ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಕಲಬುರಗಿ, ಮೈಸೂರು, ಮಂಗಳೂರು, ಉಡುಪಿಯಲ್ಲಿ ಪರೀಕ್ಷೆ ನಡೆಯಲಿದೆ.
ನೀಟ್ ಪರೀಕ್ಷೆಗಾಗಿ 16 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು ಒಟ್ಟು 180 ಪ್ರಶ್ನೆಗಳಿದ್ದು ಪ್ರತಿ ಪ್ರಶ್ನೆಗೆ 4 ಅಂಕಗಳು ಇರುತ್ತವೆ. 720 ಅಂಕಗಳಿಗೆ ಪರೀಕ್ಷೆ ನಡೆಯಲಿದೆ.
ಪ್ರತಿ ಪ್ರಶ್ನೆಯ ತಪ್ಪು ಉತ್ತರಕ್ಕೆ ಒಂದು ನೆಗೆಟಿವ್ ಅಂಕ ಕಡಿತವಾಗುತ್ತದೆ. 3 ಗಂಟೆಗಳ ಕಾಲ ಪರೀಕ್ಷೆ ನಡೆಯುತ್ತಿದ್ದು, ಒಟ್ಟು 13 ಭಾಷೆಗಳಲ್ಲಿ ಪರೀಕ್ಷೆ ನಡೆಯಲಿದೆ.
ರಸಾಯನಶಾಸ್ತ್ರ, ಭೌತಶಾಸ್ತ್ರ, ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ ವಿಷಯಗಳಿಗೆ ತಲಾ 45 ಪ್ರಶ್ನೆಗಳಿರಲಿವೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
More Stories
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ನಕ್ಸಲ್ ನಾಯಕ ವಿಕ್ರಂ ಗೌಡ ಎನ್ಕೌಂಟರ್: ಗೃಹಸಚಿವ ಪರಮೇಶ್ವರ್ ದೃಢೀಕರಣ
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ