ಜಿಲ್ಲಾ ಕರವೇ ಅಧ್ಯಕ್ಷ ಎಚ್ ಡಿ ಜಯರಾಂ ನೇತೃತ್ವದಲ್ಲಿ, ರೈತರು,
ಕಾರ್ಯಕರ್ತರು ಮಂಗಳವಾರ ಹಿಂದಿ ದಿವಸ್ ಆಚರಣೆಯನ್ನು ಖಂಡಿಸಿ ಜಿಲ್ಲಾ ಪ್ರಧಾನ ಅಂಚೆ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಕೇಂದ್ರ ಸರ್ಕಾರ ದೇಶದೆಲ್ಲೆಡೆ ಹಿಂದಿ ಹೇರಿಕೆ ಮಾಡುವ ಉದ್ದೇಶದಿಂದ ಹಿಂದಿ ದಿವಸ್ ಆಚರಣೆ ಮಾಡಲಾಗುತ್ತಿದೆ. ಯಾವುದೇ ಕಾರಣಕ್ಕೂ ಹಿಂದಿ ದಿವಸ್ ಆಚರಣೆ ಮಾಡಬಾರದು. ದೇಶದ ಎಲ್ಲ ಭಾಷೆಗಳಿಗೆ ಮಹತ್ವ ನೀಡಬೇಕಲ್ಲದೆ, ಕನ್ನಡ ಭಾಷೆ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಕಲ್ಪಿಸಬೇಕೆಂದು ಪ್ರತಿಭಟನೆ ಕಾರರು ಆಗ್ರಹಿಸಿದರು.
ಪ್ರತಿಭಟನೆಯ ಒತ್ತಾಯಗಳು:
- ಕೇಂದ್ರ ಸರ್ಕಾರ ರೈತರನ್ನು ಉದ್ಯಮಿಗಳಿಗೆ ಒತ್ತೆ ಇಡಲು ಜಾರಿಗೊಳಿಸಿರುವ ಕಾಯ್ದೆಗಳನ್ನು ಕೂಡಲೇ ರದ್ಧುಪಡಿಸಬೇಕು.
- ಈ ಕಾಯ್ದೆಗಳ ವಿರುದ್ಧ ದೆಹಲಿ ಗಡಿಯಲ್ಲಿ ನಿರಂತರವಾಗಿ ಹೋರಾಟ ನಡೆಸುತ್ತಿರುವ ರೈತರ ಆಗ್ರಹಕ್ಕೆ ಕಿವಿಗೊಡದ ಕೇಂದ್ರ ಸರ್ಕಾರ ಹಿಂದಿ ಹೇರಲು ಮುಂದಾಗಿರುವುದು ನಾಚಿಕೆಗೇಡಿನ ಸಂಗತಿ.
- ತಕ್ಷಣ ರೈತರ ಹಿತಕಾಯಲು ಮುಂದಾಗಬೇಕಲ್ಲದೆ, 9.5 ಇಳುವರಿ ಬರುವ ಟನ್ ಕಬ್ಬಿಗೆ 4000 ರೂ. ನಿಗದಿ ಮಾಡಬೇಕು.
- ಸುಪ್ರೀಂ ಕೋರ್ಟ್ ತೀರ್ಪಿನಂತೆ 14 ದಿನದೊಳಗೆ ರೈತರಿಗೆ ಕಬ್ಬಿನ ಹಣ ಪಾವತಿಸಲು ಕ್ರಮಕೈಗೊಳ್ಳಬೇಕು.
- ರೈತರ ಕಬ್ಬು ಇಳುವರಿ ಹಾಗೂ ತೂಕದ ಯಂತ್ರಗಳ ಮೇಲೆ ಹದ್ದಿನ ಕಣ್ಣಿಡಲು ರೈತರು ಹಾಗೂ ಜನಪರ ಸಂಘಟನೆಗಳು ಹಾಗೂ ಅಧಿಕಾರಿಗಳನ್ನು ಒಗ್ಗೂಡಿ ಸಮಿತಿಯನ್ನು ರಚಿಸಬೇಕು.
- ಹಿಂದಿ ಹೇರಿಕೆಯಿಂದ ಹಿಂದೆ ಸರಿದು, ನಮ್ಮ ಇತರೆ ಬೇಡಿಕೆಗಳನ್ನು ಕೇಂದ್ರ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು
- ನಾಳೆ ರಾಜ್’ಘಾಟ್ನಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಂತ್ಯಸಂಸ್ಕಾರ
- ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ: ಬೆಂಗಳೂರು ಸೇರಿ 21 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
- ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ
- ಹಾಲಿನ ದರ ಏರಿಕೆ? ಶೀಘ್ರದಲ್ಲೇ ಕೆಎಂಎಫ್ ನಿರ್ಣಯ
- ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ
More Stories
ನಾಳೆ ರಾಜ್’ಘಾಟ್ನಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಂತ್ಯಸಂಸ್ಕಾರ
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ: ಬೆಂಗಳೂರು ಸೇರಿ 21 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ