ಮುಂದಿನ ತಿಂಗಳು ಕಲಬುರಗಿಯಲ್ಲಿ ನಡೆಸಲು ಉದ್ದೇಶಿಸಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ 36ನೇ ರಾಜ್ಯ ಸಮ್ಮೇಳನ ಉದ್ಘಾಟನೆಗೆ ನೆರವೇರಿಸಲು ಆಗಮಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಯಿತು.
ವಿಧಾನಸೌಧದಲ್ಲಿಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ನೇತೃತ್ವ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಉಸ್ತುವಾರಿ ಯಲ್ಲಿ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿ ಸಮ್ಮೇಳನ ಉದ್ಘಾಟನೆ ದಿನಾಂಕ ನಿಗದಿ ಜತೆಗೆ ಸಮ್ಮೇಳನ ಉದ್ಘಾಟನೆ ಆಗಮಿಸುವಂತೆ ಆಹ್ವಾನಿಸಲಾಯಿತು.
ಮನವಿ ಆಲಿಸಿದ ಮುಖ್ಯಮಂತ್ರಿ ಗಳು ಕಲಬುರಗಿಯಲ್ಲಿನ ಪತ್ರಕರ್ತರ ಸಮ್ಮೇಳನ ಕ್ಕೆ ಸಂಪೂರ್ಣ ಸಹಕಾರವಿದೆ. ಇದೇ ಸೆ. 17ಕ್ಕೆ ಕಲಬುರಗಿ ಗೆ ಆಗಮಿಸುತ್ತಿದ್ದು ಅಲ್ಲಿ ಸಮ್ಮೇಳನ ಕುರಿತಾಗಿ ಚರ್ಚಿಸೋಣ ಎಂದು ತಿಳಿಸಿದರು.
ಸಮ್ಮೇಳನಕ್ಕೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಕಲಬುರಗಿ ಜಿಲ್ಲಾಧ್ಯಕ್ಷ ಭವಾನಿಸಿಂಗ್ ಠಾಕೂರ್, ಪ್ರಧಾನ ಕಾರ್ಯದರ್ಶಿ ದೇವಿಂದ್ರಪ್ಪ ಅವಂಟಿ, ರಾಜ್ಯ ಸಮಿತಿ ಸದಸ್ಯರಾದ ಹಣಮಂತರಾವ ಭೈರಾಮಡಗಿ, ದೇವಿಂದ್ರಪ್ಪ ಕಪನೂರ, ಖಜಾಂಚಿ ರಾಜು ದೇಶಮುಖ ಸೇರಿದಂತೆ ಮುಂತಾದವರಿದ್ದರು.
- ನಂಬುಗೆಯೇ ಇಂಬು
- KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
- Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
More Stories
ನಂಬುಗೆಯೇ ಇಂಬು
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.