ದೇವಾಲಯ ತೆರವು ಮಾಡಿದ್ದು ಸರಿಯಲ್ಲ. ಮೊದಲು ಚರ್ಚೆ ಮಾಡಬೇಕಿತ್ತು. ಏಕಾಏಕಿ ದೇಗುಲ ಧ್ವಂಸ ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಮೈಸೂರಿನ ಸುತ್ತೂರುಶಾಖಾ ಮಠಕ್ಕೆ ಇಂದು ಭೇಟಿ ನೀಡಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳ ಆಶೀರ್ವಾದ ಪಡೆದ ನಂತರ ಬಿಎಸ್‌ವೈ ಸುದ್ದಿಗಾರರೊಂದಿಗೆ ಮಾತನಾಡಿದರು. ಯಾವುದೇ ಕಾರಣಕ್ಕೂ ದೇಗುಲ ತೆರವು ಮಾಡದಂತೆ ಆಗ್ರಹಿಸುವುದಾಗಿ ತಿಳಿಸಿದರು.
ಈಗಾಗಲೇ ಮುಖ್ಕಮಂತ್ರಿ ಬಸವರಾಜ ಬೊಮ್ಮಾಯಿ ದೇವಾಲಯ ತೆರವುಗೊಳಿಸದಂತೆ ಸೂಚನೆ ನೀಡಿದ್ದಾರೆಂದು ನುಡಿದರು. ಬಸವರಾಜ ಬೊಮ್ಮಾಯಿ ಉತ್ತಮ ಆಡಳಿತ ನೀಡುತ್ತಿದ್ದಾರೆ ಎನ್ನುವುದು ತಮ್ಮ ಅಭಿಪ್ರಾಯ. ಜನರ ಅಭಿಮತವೂ ಇದೇ ಆಗಿದೆ. ಬರುವ ದಿನಗಳಲ್ಲಿ ಮತ್ತಷ್ಟು ಉತ್ತಮ ಆಡಳಿತ ನೀಡುವರು ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ವಿಧಾನಮಂಡಲದ ಅಧಿವೇಶನ ಮುಗಿದ ಬಳಿಕ ತಾವು, ಪಕ್ಷದ ರಾಜ್ಯಾಧ್ಯಕ್ಷರು ರಾಜ್ಯದೆಲ್ಲೆಡೆ ಪ್ರವಾಸ ಮಾಡುತ್ತೇವೆ. ಈ ಕುರಿತು ರೂಪುರೇಷೆ ಸಿದ್ಧವಾಗುತ್ತಿದೆ ಎಂದರು. ತಮ್ಮ ಪುತ್ರ ವಿಜಯೇಂದ್ರ ಯಾವುದೇ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಯಾವ ಕ್ಷೇತ್ರದಲ್ಲಿ ನಿಲ್ಲುತ್ತಾರೆ ಎಂಬುದು ಇನ್ನೂ ತೀರ್ಮಾನವಾಗಿಲ್ಲ. ಸದ್ಯಕ್ಕೆ ರಾಜ್ಯದಲ್ಲಿ ಪ್ರವಾಸ ಮಾಡುತ್ತಿದ್ದಾರೆ ಎಂದು ಯಡಿಯೂರಪ್ಪ ಪ್ರತಿಕ್ರಿಯಿಸಿದರು.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ