January 29, 2026

Newsnap Kannada

The World at your finger tips!

k g bopayah

ಮತಾಂತರ ತಡೆಗೆ ಯುಪಿ ರೀತಿಯ ಕಾನೂನು ತನ್ನಿ: ಬೋಪಯ್ಯ ಒತ್ತಾಯ

Spread the love

ಮತಾಂತರ ತಡೆಗೆ ಉತ್ತರ ಪ್ರದೇಶದ ರೀತಿಯಲ್ಲಿ ರಾಜ್ಯದಲ್ಲೂ ಕಾನೂನು ತರಬೇಕಿದೆ ಎಂದು ಶಾಸಕ ಕೆ.ಜಿ. ಬೋಪಯ್ಯ ವಿಧಾನಸಭೆಯಲ್ಲಿಂದು ಒತ್ತಾಯಿಸಿದರು.ಎಲ್ಲ ಕಡೆ ಮತಾಂತರ ಜಾಸ್ತಿ ಆಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕೆಂದರೆ ಕಾಯ್ದೆ ಜಾರಿಗೊಳಿಸಬೇಕೆಂದು ಸರ್ಕಾರವನ್ನು ಆಗ್ರಹಿಸಿದರು.


ಕಲಾಪದ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕ ಗೂಳಿಹಟ್ಟಿ ಶೇಖರ್, ಚಿತ್ರದುರ್ಗದಲ್ಲಿ 20 ಸಾವಿರಕ್ಕೂ ಹೆಚ್ಚು ಜನ ಮತಾಂತರವಾಗಿದ್ದಾರೆ. ನನ್ನ ಹೆತ್ತ ತಾಯಿಯನ್ನೂ ಮತಾಂತರ ಮಾಡಿದ್ದಾರೆ ಎಂದು ಹೇಳಿದರು. ಚರ್ಚಗಳಲ್ಲಿ ಬ್ರೈನ್ ವಾಶ್ ಮಾಡುತ್ತಿದ್ದಾರೆ, ತಾಯಿಗೂ ಬ್ರೈನ್ ವಾಶ್ ಮಾಡಿದ್ದಾರೆ ಎಂದು ದೂರಿದರು.


ದಲಿತರು, ಹಿಂದುಳಿದ ವರ್ಗದವರನ್ನು ಜಾಸ್ತಿ ಮತಾಂತರ ಮಾಡುತ್ತಿದ್ದಾರೆ. ಇದೊಂದು ದೊಡ್ಡ ಪಿಡುಗು. ಇದಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.


ಸದಸ್ಯರ ಮಾತುಗಳನ್ನು ಕೇಳಿದ ಗೃಹಸಚಿವ ಆರಗ ಜ್ಞಾನೇಂದ್ರ, ಆಮಿಷವೊಡ್ಡಿ ಮತಾಂತ ಮಾಡುವುದು ಅಪರಾಧ. ಶಾಂತಿ ಭಂಗವುಂಟು ಮಾಡುವ ಆತಂಕವೂ ಇದೆ. ಮುಂದೆ ಏನು ಮಾಡಬೇಕು ಎಂಬ ಕುರಿತು ರಾಜ್ಯ ಸರ್ಕಾರ ತೀರ್ಮಾನ ಮಾಡಲಿದೆ ಎಂದು ಹೇಳಿದರು.

error: Content is protected !!