November 25, 2024

Newsnap Kannada

The World at your finger tips!

grm photo

ಗ್ರಾಪಂನಲ್ಲಿ ಪ್ರಧಾನಿ ಭಾವಚಿತ್ರ ಹಾಕಿದ್ದನ್ನು ತಡೆದ ಜೆಡಿಎಸ್ ಸದಸ್ಯರು, ಪಿಡಿಒ- ದೂರು ದಾಖಲು

Spread the love

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಭಾವಚಿತ್ರ ಅಳವಡಿಕೆಗೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕು ನೊರನಕ್ಕಿ ಗ್ರಾಮ ಪಂಚಾಯಿತಿಯಲ್ಲಿ ವಿವಾದ ತಾರಕ್ಕೆ ಏರಿ,ಪೋಲಿಸ್ ಠಾಣೆಯಲ್ಲಿ ದೂರು- ಪ್ರತಿ ದೂರು ದಾಖಲಾಗಿದೆ.

ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ಇದೆ. ಪೋಲಿಸ್ ಭದ್ರತೆಯೂ‌ ಇದೆ.

ಪ್ರಕರಣದ ವಿವರ :

ನೊರನಕ್ಕಿ ಗ್ರಾಪಂ ಕಚೇರಿಯಲ್ಲಿ ಸೆ.17ರಂದು ನರೇಂದ್ರ ಮೋದಿ ಜನ್ಮ ದಿನಾಚರಣೆ ನಿಮಿತ್ತ ಫೋಟೋ ಹಾಕಲಾಗಿದೆ.

ಇದಕ್ಕೆ ಜೆಡಿಎಸ್ ಬೆಂಬಲಿತ ಸದಸ್ಯರು ಹಾಗೂ ಅಧಿಕಾರಿ ವರ್ಗ ವಿರೋಧ ವ್ಯಕ್ತಪಡಿಸಿದ್ದಾರೆ. ಫೋಟೋ ಹಾಕುವುದು ಬೇಡ ಎಂದು ಸೂಚಿಸಿದ್ದೇವು. ಆದರೂ ಕರ್ತವ್ಯಕ್ಕೆ ಅಡ್ಡಿಪಡಿಸಿ ಫೋಟೋ ಹಾಕಿದ್ದಾರೆ ಎಂದು ಬಿಜೆಪಿ ಬೆಂಬಲಿತ ಸದಸ್ಯರಾದ ಭಾರ್ಗವಿ, ಚಂದ್ರಕಲಾ, ನಿಂಗೇಗೌಡ, ಲಕ್ಷ್ಮೀಶ ಮತ್ತು ಬಿಜೆಪಿ ಮುಖಂಡರಾದ ಗಿರೀಶ್, ಮಧು ಸೇರಿದಂತೆ 20 ಜನರ ವಿರುದ್ಧ ಪಿಡಿಒ ದೂರು ದಾಖಲಿಸಿದ್ದಾರೆ.

ನಾನು ಪಿಡಿಒ ಒಪ್ಪಿಗೆ ಪಡೆದು ಫೋಟೋ ಹಾಕಿದ್ದೆ. ಆದರೀಗ ನನ್ನ ಜಾತಿ ಬಗ್ಗೆ ಮಾತನಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಯಾರೋ ಉತ್ತರ ಭಾರತದವನ ಫೋಟೋ ಹಾಕುತ್ತೀಯ ಎಂದು ಪ್ರಧಾನಿಗೆ ಅವಮಾನ ಮಾಡಿದ್ದಾರೆ. ಇದಕ್ಕೆ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷ ಸೇರಿದಂತೆ ಹಲವರು ಕುಮ್ಮಕ್ಕು ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಬೆಂಬಲಿತ ಸದಸ್ಯೆಯೂ ಕೂಡ ಪಿಡಿಒ, ಬಿಲ್‍ಕಲೆಕ್ಟರ್, ಅಕೌಂಟೆಂಟ್, ಅಧ್ಯಕ್ಷ, ಉಪಾಧ್ಯಕ್ಷ ಸೇರಿದಂತೆ 16 ಜನರ ವಿರುದ್ಧ ದೂರು ನೀಡಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!