ವಿಧಾನ ಪರಿಷತ್ನಲ್ಲಿ ಬುಧವಾರ ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಯುವತಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ಸದಸ್ಯರು ಗಂಭೀರ ಚರ್ಚೆಯಲ್ಲಿ ತೊಡಗಿದ್ದರೆ, ಅಧಿಕಾರಿಗಳ ಗ್ಯಾಲರಿ ಯಲ್ಲಿ ಕುಳಿತಿದ್ದ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮಾತ್ರ ನಿದ್ರೆಗೆ ಜಾರಿದ್ದು ಕ್ಯಾಮರಾ ಗೆ ಸೆರೆಯಾಯಿತು.
ಸಾಮೂಹಿಕ ಅತ್ಯಾಚಾರ ಪ್ರಕರಣದ ವಿಚಾರವಾಗಿ ಪರಿಷತ್ ವಿಪಕ್ಷ ನಾಯಕ ಎಸ್. ಆರ್.ಪಾಟೀಲ್ ಮಾತನಾಡುತ್ತಿದ್ದರು. ಈ ವೇಳೆ ರೋಹಿಣಿ ಸಿಂಧೂರಿ ನಿದ್ರೆಗೆ ಜಾರಿದ್ದು ಕಂಡುಬಂದಿದೆ.
ಇನ್ನೊಂದೆಡೆ ವಿಧಾನಸಭೆಯಲ್ಲಿಯೂ ಕೂಡ ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ವಿಚಾರ ಪ್ರತಿಧ್ವನಿಸಿತು.
ವಿಪಕ್ಷಗಳ ನಾಯಕರು ಸರ್ಕಾರದ ವಿರುದ್ಧ ಹರಿಹಾಯ್ದರು. ಅಲ್ಲದೇ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಅತ್ಯಾಚಾರ ಪ್ರಕರಣದ ಕುರಿತು ಚರ್ಚೆ ನಡೆಸುವಾಗ ಭಾವುಕರಾಗಿ ಕಣ್ಣೀರು ಹಾಕಿದ ಘಟನೆ ನಡೆಯಿತು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು