December 25, 2024

Newsnap Kannada

The World at your finger tips!

s t s a

ಅಮಿತ್ ಶಾ – ಸೋಮಶೇಖರ್ ಭೇಟಿ : ಸಮ್ಮೇಳನಕ್ಕೆ ಆಹ್ವಾನ

Spread the love

ಕೇಂದ್ರ ಗೃಹ ಸಚಿವ ಹಾಗೂ ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರನ್ನು ರಾಜ್ಯ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ನವದೆಹಲಿಯಲ್ಲಿ ಶನಿವಾರ ಸಂಜೆ 7 ರ ವೇಳೆಗೆ ಭೇಟಿ ಮಾಡಿ ಮಾತುಕತೆ ನಡೆಸಿದರು.

stsam


ಬರುವ ನವೆಂಬರ್ ಅಥವಾ ಡಿಸೆಂಬರ್‌ನಲ್ಲಿ ರಾಜ್ಯದಲ್ಲಿ ಏರ್ಪಡಿಸಲು ಉದ್ದೇಶಿಸಿರುವ ಕರ್ನಾಟಕ ರಾಜ್ಯ ಮಟ್ಟದ ಸಹಕಾರ ಸಮ್ಮೇಳನಕ್ಕೆ ಆಗಮಿಸುವಂತೆ ಶಾ ಅವರನ್ನು ಆಹ್ವಾನಿಸಿದರು. “ಸಹಕಾರ್ ಸೇ ಸಮೃದ್ಧಿ’ ಧ್ಯೇಯ ವಾಕ್ಯದೊಂದಿಗೆ ಹಮ್ಮಿಕೊಳ್ಳುತ್ತಿರುವ ಈ ಕಾರ್ಯಕ್ರಮದಲ್ಲಿ ಸಹಕಾರ ಇಲಾಖೆಗೆ ಹೊಸ ರೂಪ ನೀಡುವುದು ಮತ್ತು ಇಲಾಖೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶವಿದೆ ಎಂದು ವಿವರಿಸಿದರು.


ಸಹಕಾರ ಇಲಾಖೆ ಆಧುನೀಕರಣಕ್ಕೆ 5 ಸಾವಿರಕೋಟಿರೂ. ಅನುದಾನ ಬಿಡುಗಡೆ ಮಾಡುವಂತೆ ಇದೇ ಸಂದರ್ಭದಲ್ಲಿ ಸಚಿವರು ಕೋರಿದರು. ಇದಕ್ಕೆ ಅಮಿತ್ ಶಾ ಸಕಾರಾತ್ಮಕವಾಗಿ ಸ್ಪಂದಿಸಿದರು.


ಈ ಭೇಟಿ ವೇಳೆ ಕರ್ನಾಟಕ ಸೌಹಾರ್ದ ಒಕ್ಕೂಟದ ಅಧ್ಯಕ್ಷ ಕೃಷ್ಣರೆಡ್ಡಿ, ಸಹಕಾರ ಭಾರತೀಯ ರಾಷ್ಟ್ರೀಯ ಅಧ್ಯಕ್ಷ ರಮೇಶ್ ವೈದ್ಯ, ಮಂಡ್ಯ ಜಿಲ್ಲಾ ಸಹಕಾರ ಬ್ಯಾಂಕಿನ ಅಧ್ಯಕ್ಷ ಸಿ.ಪಿ. ಉಮೇಶ್, ಸಹಕಾರ ಸಚಿವರ ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ ಮತ್ತಿತರರು ಉಪಸ್ಥಿತರಿದ್ದರು.

Copyright © All rights reserved Newsnap | Newsever by AF themes.
error: Content is protected !!