ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಕರ್ನಾಟಕದ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿಯವರನ್ನು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಹೆಸರಿಸಿದ ಬೆನ್ನಲ್ಲೇ ಸಿ.ಟಿ. ರವಿಯವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಬಿಜೆಪಿ ಪಕ್ಷದ ನಿಯಮಗಳ ಪ್ರಕಾರ ಯಾವುದೇ ಒಬ್ಬ ಸದಸ್ಯ ಪಕ್ಷದಲ್ಲಿ ಒಂದೇ ಸಮಯದಲ್ಲಿ ಎರಡು ಹುದ್ದೆಗಳನ್ನು ಅಲಂಕರಿಸುವಂತಿಲ್ಲ. ಹಾಗಾಗಿ ರವಿಯವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.
ಸುದ್ದಿಗಾರರೊಡನೆ ಮಾತನಾಡಿದ ರವಿ ‘ಸಚಿವ ಸ್ಥಾನ ಬಿಡಲು ನಾನು ಸಿದ್ಧ. ಪಕ್ಷ ಸೂಚಿಸಿದಾಗ ರಾಜೀನಾಮೆ ನೀಡುವೆ. ಪಕ್ಷ ಸಂಘಟನೆಯೇ ನನ್ನ ಮುಖ್ಯ ಉದ್ದೇಶ. ಪಕ್ಷ ಯಾವುದೇ ಜವಾಬ್ದಾರಿ ಕೊಟ್ರು ನಿಭಾಯಿಸುವೆ. ಪ್ರಧಾನ ಕಾರ್ಯದರ್ಶಿ ಸ್ಥಾನ ಸಿಕ್ಕಿದ್ದು ಪುಣ್ಯ. ದೆಹಲಿ ಮಟ್ಟದಲ್ಲಿ ರಾಜಕಾರಣ ಮಾಡಲ್ಲ. ನಾನು ರಾಜ್ಯ ಮಟ್ಟದಲ್ಲಿಯೇ ಇರುತ್ತೇನೆ’ ಎಂದಿದ್ದಾರೆ.
ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು ಈಗಾಗಲೇ ಮುಖ್ಯಮಂತ್ರಿಗಳ ಜೊತೆ ಮಾತನಾಡಿರುವ ಸಿ.ಟಿ. ರವಿಯವರು ಅಕ್ಟೋಬರ್ 2 ರಂದು ಪ್ರಧಾನ ಕಾರ್ಯದರ್ಶಿಯ ಅಧಿಕಾರವನ್ನು ಸ್ವೀಕರಿಸಲಿದ್ದಾರೆ. ಅಂದೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ.
More Stories
ಮಂಗೋಟೆ ಶ್ರೀ ಮುರುಗೆಪ್ಪ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬೃಹತ್ ಉದ್ಯೋಗ ಮೇಳ
ಅನಾರೋಗ್ಯ ದಿಂದ ಬಳಲುತ್ತಿರುವ ನಟಿ ಸಂಜನಾ ಮತ್ತೆ ಆಸ್ಪತ್ರೆಗೆ ದಾಖಲು
ಮದ್ದೂರಿನ ಮಹಿಳೆ ಮೇಲೆ ಅತ್ಯಾಚಾರ , ಕೊಲೆ ಮಾಡಿದ್ದ ಇಬ್ಬರು ದುಷ್ಕರ್ಮಿಗಳ ಬಂಧನ