ರಾಜ್ಯದ ಹಾನಗಲ್, ಸಿಂದಗಿ ಕ್ಷೇತ್ರಗಳ ಉಪಚುನಾವಣೆ ಅಕ್ಟೋಬರ್ 30 ರಂದು ನಡೆಯಲಿದೆ.
ಕೇಂದ್ರ ಚುನಾವಣಾ ಆಯೋಗ ಈ ಕುರಿತಂತೆ ಅದೇಶ ಹೊರಡಿಸಿದೆ.
ಅಕ್ಟೋಬರ್ 1ರಂದು ಅಧಿಸೂಚನೆ ಪ್ರಕಟವಾಗಲಿದೆ. ನವೆಂಬರ್ 2ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಅಕ್ಟೋಬರ್ 8 ನಾಮಪತ್ರ ಸಲ್ಲಿಕೆ ಮಾಡಲು ಕೊನೆಯ ದಿನವಾಗಿದೆ. ಅಕ್ಟೋಬರ್ 16 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನಾಂಕವಾಗಿದೆ. ಚುನಾವಣಾ ನೀತಿ ಸಂಹಿತೆ ಇಂದಿನಿಂದಲೇ ಜಾರಿ ಆಗಲಿದೆ.
ಸಿಎಂ ಉದಾಸಿಯವರ ನಿಧನದಿಂದ ಹಾನಗಲ್ ವಿಧಾನಸಭಾ ಕ್ಷೇತ್ರದ ಸ್ಥಾನ ತೆರವಾಗಿತ್ತು. ಇನ್ನು, ಸಿಂದಗಿ ಜೆಡಿಎಸ್ ಶಾಸಕ ಮನಗೂಳಿಯವರ ನಿಧನದಿಂದ ಸ್ಥಾನ ತೆರವಾಗಿತ್ತು.
ರಾಜ್ಯದ ಎರಡು ಕ್ಷೇತ್ರ ಸೇರಿದಂತೆ ದೇಶದ ಬೇರೆ ಬೇರೆ ರಾಜ್ಯಗಳು ಸೇರಿದಂತೆ ಒಟ್ಟು 30 ಕ್ಷೇತ್ರಗಳ ಉಪಚುನಾವಣೆ ಘೋಷಣೆಯಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು