ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಮೂವರನ್ನು ಅಳಿಯನೇ ಧಾರುಣವಾಗಿ ಕೊಲೆ ಮಾಡಿರುವ ಘಟನೆ ರಾಯಚೂರು ಹೊರವಲಯದ ಯರಮರಸ್ ಕ್ಯಾಂಪ್ ನಲ್ಲಿ ಜರುಗಿದೆ.
ಸಂತೋಷಿ (45), ವೈಷ್ಣವಿ (18) ಮತ್ತು ಆರತಿ (16) ಕೊಲೆಯಾದ ದುರ್ದೈವಿಗಳು.
ಕಳೆದ 6 ತಿಂಗಳ ಹಿಂದೆಯಷ್ಟೇ ವೈಷ್ಣವಿ ಅವರಿಗೆ ತೆಲಂಗಾಣದ ಹೈದಾರಾಬಾದ್ ಮೂಲದ ಸಾಯಿ ಎಂಬಾತನೊಂದಿಗೆ ಕುಟುಂಬಸ್ಥರು ಮದುವೆ ಮಾಡಿಕೊಟ್ಟಿದ್ದರು.
ಆದರೆ ಮದುವೆ ಆದ ದಿನದಿಂದಲೂ ಅಳಿಯ ಸಾಯಿ ಹೆಂಡತಿ ಕುಟುಂಬದೊಂದಿಗೆ ಜಗಳ ಮಾಡುತ್ತಿದ್ದ ಎನ್ನಲಾಗಿದೆ.
ನಿನ್ನೆ ರಾತ್ರಿ ಕೂಡ ಅಳಿಯನೇ ಮನೆಗೆ ಬಂದು ಅತ್ತೆ, ಹೆಂಡತಿ ಹಾಗೂ 16 ವರ್ಷದ ಆರತಿಯನ್ನು ಕೊಲೆ ಮಾಡಿರುವ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.
ಈ ಘಟನೆ ಕುರಿತಂತೆ ಮಾಹಿತಿ ಪಡೆದುಕೊಂಡಿರುವ ರಾಯಚೂರು ಗ್ರಾಮೀಣ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿ ಬಾಬು ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಶ್ವಾನ ದಳ ಕೂಡ ಆಗಮಿಸಿತ್ತು. ಎಫ್.ಎಸ್.ಎಲ್ ತಂಡ ಹೆಚ್ಚಿನ ಪರಿಶೀಲನೆ ನಡೆಸುತ್ತಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ