ಕಿರುತೆರೆ ಧಾರಾವಾಹಿ ಹಾಗೂ ಕೆಲ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದ ನಟಿ ಸೌಜನ್ಯ (25) ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ದೊಡ್ಡಬೆಲೆಯಲ್ಲಿ ನಡೆದಿದೆ.
ಕುಂಬಳಗೋಡು ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 4 ಪುಟಗಳ ಡೆತ್ನೋಟ್ ಬರೆದಿಟ್ಟು ಅಪಾರ್ಟ್ಮೆಂಟ್ನಲ್ಲಿ ನಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ದೊಡ್ಡ ಬೆಲೆ ಗ್ರಾಮದ ಸನ್ ವರ್ಥ್ ಅಪಾರ್ಟ್ಮೆಂಟ್ನಲ್ಲಿ ನಟಿ ಸೌಜನ್ಯ ವಾಸಿಸುತ್ತಿ ದ್ದರು.
ಇಂದು ಬೆಳಗ್ಗೆ ತನ್ನ ಗೆಳೆಯನೊಂದಿಗೆ ಊಟ ತರಲು ಹೇಳಿ ಮನೆಯಿಂದ ಹೊರಗೆ ಕಳುಹಿಸಿ, ಆತ ಮನೆಗೆ ವಾಪಸ್ ಬರೋ ವೇಳೆಗೆ ಆತ್ಮಹತ್ಯೆಗೆ ಶರಣಾಗಿದ್ದರಂತೆ.
ಅಪಾರ್ಟ್ಮೆಂಟ್ಗೆ ಸೌಜನ್ಯ ಗೆಳೆಯ ವಾಪಸ್ ಬಂದ ಸಂದರ್ಭದಲ್ಲಿ ಘಟನೆ ಬೆಳಕಿಗೆ ಬಂದಿದೆ.
ನಟಿಯ ಶವದ ಬಳಿ ಪತ್ತೆಯಾಗಿದೆ. 4 ಪುಟಗಳ ಈ ಪತ್ರದಲ್ಲಿ ನನಗೆ ಸಾಕಷ್ಟು ಆರೋಗ್ಯ ಸಮಸ್ಯೆ ಇದೆ. ಆದರೆ ಯಾರಿಗೂ ಹೇಳಿಕೊಳ್ಳಲು ಆಗುತ್ತಿಲ್ಲ. ಸಾಕಷ್ಟು ಬಾರೀ ಚಿಕಿತ್ಸೆ ಪಡೆದುಕೊಂಡರು ಆಗುತ್ತಿಲ್ಲ. ಆದ್ದರಿಂದಲೇ ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ. ನನ್ನ ಸಾವಿಗೆ ಯಾರೂ ಕಾರಣರಲ್ಲ. ನನ್ನನ್ನು ಕ್ಷಮಿಸಿ ಬಿಡಿ ಎಂದು ಪತ್ರದಲ್ಲಿ ತಂದೆ-ತಾಯಿ ಬಳಿ ಕ್ಷಮೆ ಕೇಳಿದ್ದಾರೆ ಎನ್ನಲಾಗಿದೆ.
ಕೊಡಗಿನ ಕುಶಾಲನಗರದ ಸೌಜನ್ಯ ಅವರು ತಮ್ಮ ಗೆಳೆಯನೊಂದಿಗೆ ಕಳೆದ ಕೆಲ ತಿಂಗಳಿನಿಂದ ಅಪಾರ್ಟ್ಮೆಂಟ್ನಲ್ಲಿ ವಾಸಿಸುತ್ತಿದ್ದರು. ಕನ್ನಡದ ಹಲವು ಧಾರಾವಾಹಿ ಹಾಗೂ ಚೌಕಟ್ಟು ಮತ್ತೆ ಫನ್ ಸಿನಿಮಾಗಳಲ್ಲಿ ನಟಿಸಿದ್ದರು.
- ಕರ್ನಾಟಕ ಸೇರಿದಂತೆ 14 ರಾಜ್ಯಗಳಲ್ಲಿ 2 ದಿನ ಭಾರೀ ಮಳೆಯ ಮುನ್ಸೂಚನೆ
- ನಂಬುಗೆಯೇ ಇಂಬು
- KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
- Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
More Stories
ಕಾಪರ್ ಏಜ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್ ಆತ್ಮಹತ್ಯೆ: ಕಾರಣ ನಿಗೂಢ
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ