ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ಕಡಿಮೆ ಪ್ರಮಾಣದಲ್ಲೇ ಇದೆ. ಭಯಪಡಬೇಕಾಗಿಲ್ಲ. ಒಂದು ವೇಳೆ ಮೂರನೇ ಅಲೆ ಬಂದರೂ ಅದನ್ನು ನಿಯಂತ್ರಿಸುವ ಕಾರ್ಯ ನಡೆಯಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಧೈರ್ಯ ನೀಡಿದ್ದಾರೆ.
ಮೈಸೂರಿನ ವಿದ್ಯಾರಣ್ಯಪುರಂನ ರಾಮಲಿಂಗೇಶ್ವರ ದೇವಸ್ಥಾನ ಉದ್ಯಾನದ ಆವರಣದಲ್ಲಿ ಗುರುವಾರ ನಡೆದ “ಮೋದಿ ಯುಗ್ ಉತ್ಸವ್’ ಸಮಾರಂಭದಲ್ಲಿ ಸಚಿವರು ಮಾತನಾಡಿದರು. ಈಗಾಗಲೇ ಮಕ್ಕಳಿಗೆ ಲಸಿಕೆ ನೀಡಲು ಟ್ರಯಲ್ ನಡೆಯುತ್ತಿದೆ. ಶೀಘ್ರವಾಗಿ ಮಕ್ಕಳಿಗೂ ಲಸಿಕೆ ನೀಡಲಾಗುತ್ತೆ ಎಂದು ಭರವಸೆ ನೀಡಿದರು. ಆರೋಗ್ಯ ಕರ್ನಾಟಕ ಕಟ್ಟಬೇಕು ಎನ್ನುವುದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದ ಗುರಿಯಾಗಿದೆ ಎಂದರು.
ಶಾಸಕರಾದವರು ರಸ್ತೆ, ಕಟ್ಟಡ ನಿರ್ಮಾಣ ಸೇರಿ ಹಲವು ಕಾರ್ಯಕ್ರಮ ಮಾಡುತ್ತಾರೆ. ಆದರೆ ಶಾಸಕ ರಾಮದಾಸ್ ತಮ್ಮ ಕ್ಷೇತ್ರದಲ್ಲಿ ಜನರ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರದಂತ ಕಾರ್ಯಕ್ರಮ ಹಮ್ಮಿಕೊಂಡಿರುವುದು ಮೆಚ್ಚುವಂತಹದ್ದು ಎಂದರು.
ಸಮಾರಂಭದಲ್ಲಿ ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದ ಶ್ರೀ ವಿಜಯಾನಂದ ತೀರ್ಥ ಸ್ವಾಮೀಜಿ, ಎಂಎಂಸಿಆರ್ಐ ನಿರ್ದೇಶಕ ಡಾ. ಸಿ.ಪಿ.ನಂಜರಾಜ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಚ್. ಪ್ರಸಾದ್ ಮತ್ತಿತರರು ಇದ್ದರು.
ಪ್ರಧಾನಿ ನರೇಂದ್ರ ಮೋದಿ ಜನ್ಮದಿನೋತ್ಸವದ ಅಂಗವಾಗಿ ಕೆ.ಆರ್. ಕ್ಷೇತ್ರದ ಶಾಸಕ ಎಸ್.ಎ. ರಾಮದಾಸ್ “ಮೋದಿ ಯುಗ್ ಉತ್ಸವ’ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
More Stories
ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ