ಮದ್ದೂರಿನ ಟಿಎಪಿಸಿಎಂಎಸ್ ಗೆ ಸೇರಿದ ಗೋದಾಮಿಗೆ ಬಾಡಿಗೆ ಪಾವತಿ ಮಾಡದ ಮಾಜಿ ಸಚಿವ, ಬಿಜೆಪಿ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಪುತ್ರಿ ನಿಶಾ ಯೋಗೇಶ್ವರ್ ಗೆ ಕಾನೂನು ಸಂಕಷ್ಟ ಎದುರಾಗಿದೆ.

ಮದ್ದೂರಿನ ಟಿಎಪಿಸಿಎಂಎಸ್ ಗೆ ಸೇರಿದ ಗೋದಾಮಿಗೆ ನಿಶಾ ಯೋಗೇಶ್ವರ್ ಸರಿಯಾಗಿ ಬಾಡಿಗೆ, ಕಂದಾಯ ಪಾವತಿ ಮಾಡುತ್ತಿಲ್ಲ.
ಈ ಹಿನ್ನೆಲೆಯಲ್ಲಿ ನಿಶಾ ವಿರುದ್ಧ ಟಿಎಪಿಸಿಎಂಎಸ್ ಆಡಳಿತ ಮಂಡಳಿ ಕಾನೂನು ಹೋರಾಟಕ್ಕೆ ಮುಂದಾಗಿದೆ.
ನಿಶಾ ಡೆಕ್ಕನ್ ಫೀಲ್ಡ್ ಆಗ್ರೋ ಇಂಡಸ್ಟ್ರೀಸ್ ಮಾಲೀಕರಾಗಿದ್ದಾರೆ. ಈ ಕಂಪನಿ 2017ರಲ್ಲಿ ಗೋದಾಮು ಬಾಡಿಗೆಗೆ ಪಡೆದುಕೊಂಡಿತ್ತು. ಗೋದಾಮು ಮಂಡ್ಯ ಜಿಲ್ಲೆಯ ಮದ್ದೂರಿನ ಟಿಎಪಿಸಿಎಂಎಸ್ ಗೆ ಸೇರಿದೆ.
ಈ ಕಂಪನಿ ಒಪ್ಪಂದದಂತೆ ಬಾಡಿಗೆ, ಕಂದಾಯವನ್ನು ಪಾವತಿ ಮಾಡುತ್ತಿಲ್ಲ. ಏ.2018ರಿಂದಲೂ ಬಾಡಿಗೆ, ಕಂದಾಯ ಪಾವತಿಸಿಲ್ಲ ಎಂದು ಆರೋಪ ಮಾಡಲಾಗಿದೆ.
ಗೋದಾಮು ಬಾಡಿಗೆ ಇನ್ನೂ 42.47 ಲಕ್ಷ ಬಾಕಿ ಇದೆ. ಖಾಲಿ ಜಾಗದ ನೆಲ ಬಾಡಿಗೆ 1.09ಲಕ್ಷ ಬಾಕಿ ಇದೆ. ಪುರಸಭೆಯ ಕಂದಾಯ 4.78 ಲಕ್ಷ ರೂ. ಬಾಕಿ ಇದೆ.
ಈ ಪರಿಣಾಮ ಟಿಎಪಿಸಿಎಂಎಸ್ ಆಡಳಿತ ಮಂಡಳಿ ಕಾನೂನು ಕ್ರಮಕ್ಕೆ ನಿರ್ಧರಿಸಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು