February 21, 2026

Newsnap Kannada

The World at your finger tips!

yadiurappa attige

ಮಾಜಿ ಸಿಎಂ ಯಡಿಯೂರಪ್ಪ ಅತ್ತಿಗೆ ನಿಧನ

Spread the love

ಮಾಜಿ ಸಿಎಂ ಯಡಿಯೂರಪ್ಪನವರ ಅತ್ತಿಗೆ ಶಾರದಮ್ಮ ಮಹದೇವಪ್ಪ (90) ಇಂದು ಕೆ ಆರ್ ಪೇಟೆ ತಾಲೂಕಿನ ಬೂಕನಕೆರೆಯ ತಮ್ಮ ನಿವಾಸದಲ್ಲಿ ನಿಧನರಾದರು.‌

ವಯೋಸಹಜ ಖಾಯಿಲೆ ಗಳಿಂದ ಬಳಲಿದ್ದರು. ಮೃತರು ಇಬ್ಬರು ಪುತ್ರಿಯರು, ಓರ್ವ ಪುತ್ರ, ಮೈದುನ ಯಡಿಯೂರಪ್ಪ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆಯು ಅ.4ರಂದು ಸೋಮವಾರ ಮಧ್ಯಾಹ್ನ ನಡೆಯಲಿದೆ.

ಅಂತ್ಯಕ್ರಿಯೆಯಲ್ಲಿ ಮಾಜಿ ಯಡಿಯೂರಪ್ಪ, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸಿ.ನಾರಾಯಣಗೌಡ, ಸಂಸದ ಬಿ.ವೈ.ರಾಘವೇಂದ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೆಎಂಎಫ್ ನಿರ್ದೇಶಕ ಎಸ್.ಸಿ.ಅಶೋಕ್ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ.

ಮೃತರ ನಿಧನಕ್ಕೆ ತಾಲ್ಲೂಕಿನ ವಿವಿಧ ಗಣ್ಯರು ಸಂತಾಪ ಸೂಚಿಸಿದ್ದಾರೆ.

error: Content is protected !!