ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಕೆಲವು ಗ್ರಾಮಗಳಲ್ಲಿ ಹುಚ್ಚು ನಾಯಿಯೊಂದು 30 ಕ್ಕೂ ಹೆಚ್ಚು ಮಂದಿಯನ್ನು ಕಚ್ಚಿ ಗಂಭೀರವಾಗಿ ಗಾಯಗೊಳಿಸಿದೆ.
ಕೆಆರ್‌ಪೇಟೆ ತಾಲೂಕಿನ ಮಾಕವಳ್ಳಿ, ಪುರ ಗೇಟ್, ಕುಂದನಹಳ್ಳಿ, ಹೆಗ್ಗಡಹಳ್ಳಿ, ವಡ್ಡರಹಳ್ಳಿಯಲ್ಲಿ ಓಡಾಡುತ್ತಿರುವ ಹುಚ್ಚು ಹಿಡಿದ ನಾಯಿ ಸಿಕ್ಕ ಸಿಕ್ಕವರ ಮನಸೋ ಇಚ್ಛೆ ದಾಳಿ ಮಾಡುತ್ತಿದೆ.
ಕಬ್ಬು ಕಟಾವು ಮಾಡಲು ಗ್ರಾಮಕ್ಕೆ ಆಗಮಿಸಿದ ಕೂಲಿ ಕಾರ್ಮಿಕರ ಮೇಲೂ ನಾಯಿ ದಾಳಿ ಮಾಡಿ ಕಚ್ಚಿದೆ.
ಸದ್ಯ ಹುಚ್ಚುನಾಯಿ ಕಡಿತಕ್ಕೆ ಒಳಗಾದ ಜನರಿಗೆ ಕೆಆರ್‌ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗುತ್ತಿದೆ. ಹಲವರು ನಾಯಿ ದಾಳಿಗೆ ಗಂಭಿರವಾಗಿ ಗಾಯಗೊಂಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನಿಸಲಾಗಿದೆ.
ಹುಚ್ಚು ನಾಯಿಯನ್ನು ಸೆರೆ ಹಿಡಿಯುವಂತೆ ಸ್ಥಳೀಯರು ಸಬಂಧಪಟ್ಟ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.
- ಮುಡಾ ಹಗರಣ: ಲೋಕಾಯುಕ್ತ ಸಂಸ್ಥೆಯೇ ಅಪರಾಧಿ ಸ್ಥಾನದಲ್ಲಿದೆ- ಸ್ನೇಹಮಯಿ ಕೃಷ್ಣ ಆರೋಪ
- ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!
- ಕರ್ನಾಟಕ ಸೇರಿದಂತೆ 14 ರಾಜ್ಯಗಳಲ್ಲಿ 2 ದಿನ ಭಾರೀ ಮಳೆಯ ಮುನ್ಸೂಚನೆ
- ನಂಬುಗೆಯೇ ಇಂಬು
- KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
More Stories
ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
ಸಚಿವ ಸ್ಥಾನ ನನ್ನ ಹಕ್ಕು, ಬೇಡಿಕೆಯಲ್ಲ: ನಿಖರ ಹೇಳಿಕೆ ನೀಡಿದ ‘ಕೈ’ ಶಾಸಕ ನರೇಂದ್ರ ಸ್ವಾಮಿ
ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ